Saturday, December 6, 2025

Latest Posts

ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು: ಸಿಎಂ ಸಿದ್ದರಾಮಯ್ಯ

- Advertisement -

Political Newsಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. 

ಪ್ರಧಾನಿ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ? ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು‌. ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು, ನಾವು ಮಾಡಿದ ಕೆಲಸಕ್ಕೆ ಲೋಕಸಭೆ ಚುನಾವಣೆಯಲ್ಲಿ ಕೂಲಿ ಕೊಡಿ ಎಂದು ಕೇಳುತ್ತಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಮತಕ್ಕೆ ಗೌರವ ತಂದುಕೊಟ್ಟವರು ನಾವು. ಇದನ್ನು ಜನರು ತಮ್ಮ ಹೃದಯಕ್ಕೆ ಕೇಳಿಕೊಂಡು ಯಾರಿಗೆ ಮತ ಹಾಕಬೇಕು ಎಂದು ತೀರ್ಮಾನಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ನಮ್ಮ ಸರ್ಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ಬಿಜೆಪಿ ನಾಯಕರು ಬಿಟ್ಟಿಭಾಗ್ಯ ಎಂದು ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಹೀನ ಮಾತುಗಳಿಂದ ಅವಮಾನಿಸುತ್ತಾರೆ. ನಿಮ್ಮನ್ನೇ ಅವಮಾನಿಸುವ ಬಿಜೆಪಿಗೆ ನಿಮ್ಮ‌ ಅಮೂಲ್ಯ ಮತ ನೀಡುತ್ತೀರ? ನಿಮ್ಮ ಮತಕ್ಕೆ ಅವರು ಅರ್ಹರಿದ್ದಾರ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸುವ, ಮನುಸ್ಮೃತಿ ಪರವಾದ ಮಾತಗಳನ್ನು ಆಡುತ್ತಿದೆ.  ಬಿಜೆಪಿ ಪಕ್ಷದ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ನಮ್ಮ ಸಂವಿಧಾನ ಹೋದರೆ ನಾಡಿನ ಜನರ, ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಜೆಪಿ ಮತ್ತು ಮೋದಿ ಅವರನ್ನು ಹಾಡಿ ಹೊಗಳುತ್ತಿದ್ದಾರೆ. ದ್ವಂದ್ವ ಹೇಳಿಕೆ ನೀಡುವ ಇವರನ್ನು ಹೇಗೆ ನಂಬುತ್ತೀರಿ? ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆಯು ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಬಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss