Banglore News:
ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಂತಹ ಜನಸ್ಪಂದನ ಕಾರ್ಯಕ್ರಮಕ್ಕೆ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ಕಿಡಿ ಕಾರುತ್ತಿದ್ದಾರೆ. ಬಿಜೆಪಿಗೆ ಸ್ವಲ್ಪವೂ ಅಂತಃಕರಣವಿಲ್ಲ ಎಂಬುವುದಾಗಿ ಹೇಳಿದೆ ಕಾಂಗ್ರೆಸ್. ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ. ಜನರ ಬಗ್ಗೆ ಇರಲಿ, ಕನಿಷ್ಠ ಸಚಿವರ ಬಗ್ಗೆಯೂ ‘ಸ್ಪಂದನೆ’ ಇಲ್ಲದಾಗಿದೆ ಎಂಬುವುದಾಗಿ ಹೇಳಿದ್ದಾರೆ. ಜೊತೆಗೆ ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ, ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ. ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ? ಕನಿಷ್ಠ ಅಂತಃಕರಣವಿಲ್ಲ ಭ್ರಷ್ಟೋತ್ಸವದ ಮುಂದೆ ಮಾನವೀಯತೆ ಕಳೆದುಹೋಗಿದೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿ ಕಾರಿದೆ.
ಇನ್ನೂ ಸಂಪುಟ ಸಚಿವರೊಬ್ಬರ ಸಾವಿನ ಸೂತಕವೇ ಕಳೆದಿಲ್ಲ,
ಜೀವ ಬಿಟ್ಟ ತಮ್ಮದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತನ ಕುಟುಂಬದ ಕಣ್ಣೀರು ಆರಿಲ್ಲ.ತಮ್ಮವರ ಸಾವುಗಳೇ ಬಿಜೆಪಿಗೆ ಕೊಂಚವೂ ಬೇಸರ ಮೂಡಿಸಿಲ್ಲ ಎಂದಾದರೆ ಜನರ ನೋವಿಗೆ ಮರುಕಪಡುವರೆ?@BJP4Karnataka ಗೆ ಕನಿಷ್ಠ ಅಂತಃಕರಣವಿಲ್ಲ.#BJPBrashtotsava ದ ಮುಂದೆ ಮಾನವೀಯತೆ ಕಳೆದುಹೋಗಿದೆ. pic.twitter.com/Z7WTb4lbOr
— Karnataka Congress (@INCKarnataka) September 10, 2022
“ಸರ್ಕಾರ ಹೋಗ್ತಿದೆ ಅಂತ ಗೊತ್ತಿದ್ರೆ ಡ್ಯಾನ್ಸ್ ಮಾಡಲೇ ಬೇಕಲ್ವಾ..?” : ಡಿಕೆಶಿ
“40% ಕಮಿಷನ್ ನಲ್ಲಿ ಬಿಜೆಪಿಯವರು ಜನಸ್ಪಂದನ ಮಾಡ್ತಿದ್ದಾರೆ” : ಕಾಂಗ್ರೆಸ್ ಟ್ವೀಟ್