Tuesday, April 15, 2025

Latest Posts

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

- Advertisement -

Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ.

ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ ಸಿಎಂ ಪ್ರಮೋದ್ ಸಾವಂತ್, ಕುಪೇಂದ್ರ ರೆಡ್ಡಿ, ನಿಖಿಲ್ ಕುಮಾರಸ್ವಾಮಿ ಸಹ ಹಾಜರಿದ್ದರು. ಮಾತುಕತೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಮೈತ್ರಿ ವಿಚಾರವಾಗಿ ಅಧಿಕೃತವಾಗಿ ಕೆಲವು ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ ಎಂದಷ್ಟೇ ಹೇಳಿದರು.

ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲುವುದೇ ನಮ್ಮ ಗುರಿ. ಬಿಜೆಪಿ, ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಂದೆ ಯಾವುದೇ ರೀತಿಯಲ್ಲೂ ಗೊಂದಲ ಇಲ್ಲದೆ ಮೈತ್ರಿಯಾಗಲಿದೆ ಎಂದು ಅವರು ಹೇಳಿದರು.

ಬಿಜೆಪಿ, ಜೆಡಿಎಸ್ ಮೈತ್ರಿ ಸಂಬಂಧ ಅಂತಿಮ ಮಾತುಕತೆ ವೇಳೆ ಹೆಚ್​ಡಿ ಕುಮಾರಸ್ವಾಮಿ 6 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. 6 ಕ್ಷೇತ್ರಗಳಲ್ಲಿ ಪಕ್ಷಗಳ ಬಲಾಬಲ, ಮತ ವಿವರ ಕಲೆ ಹಾಕಿ, ಬಿಜೆಪಿಗಿಂತ ಹೆಚ್ಚು ಮತಗಳು ಇರುವ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳೆಂದರೆ ತುಮಕೂರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಾಗಿವೆ. ವಿಧಾನಸಭಾ ಚುನಾವಣೆಯ ಮತ ಗಳಿಕೆಯ ಪಟ್ಟಿ ಹಿಡಿದುಕೊಂಡೇ ಕುಮಾರಸ್ವಾಮಿ ಗೃಹ ಸಚಿವ ಅಮಿತ್ ಶಾ ಬಳಿ ಮಾತುಕತೆ ನಡೆಸಿದ್ದಾರೆ.

 

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

Women : ಮಹಿಳಾ ಸಮಾನತೆಗೆ ಶತಮಾನ ಬೇಕಾ..?!

Oil Price : ಶೀಘ್ರವೇ ತೈಲ ದರ ಏರಿಕೆ ಸಾಧ್ಯತೆ..!

- Advertisement -

Latest Posts

Don't Miss