Saturday, July 27, 2024

Latest Posts

ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ಯುದ್ದದಲ್ಲಿ ಹೋರಾಡುತ್ತಾರೆ: ಅಗರ್ವಾಲ್

- Advertisement -

Hassan News: ಹಾಸನ : ಹಾಸನದಲ್ಲಿ ಪ್ರೀತಂಗೌಡ ವಿರೋಧ ವಿಚಾರದ ಬಗ್ಗೆ ಮಾತನಾಡಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರ್ವಾಲ್, ಬಿಜೆಪಿಯ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಪರ‌ ಕೆಲಸ ಮಾಡುತ್ತಿಲ್ಲ ಎನ್ನುವುದು ತಪ್ಪು. ನಮ್ಮ ಕಾರ್ಯಕರ್ತರು ಪೂರ್ತಿ ಶಕ್ತಿಯೊಂದಿಗೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಆಗುವುದನ್ನು ಕಾಯ್ತಾ ಇದ್ದಾರೆ. ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಹೆಗಲಿಗೆ ಹೆಗಲು ಕೊಟ್ಟು ಯುದ್ದದಲ್ಲಿ ಹೋರಾಡುತ್ತಾರೆ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಐದು ಲಕ್ಷ ಮತಗಳು ಬಂದಿದ್ದವು. ಈ ಭಾರಿ ಜೆಡಿಎಸ್ ಐದು ಲಕ್ಷ ಬಿಜೆಪಿ ಐದು ಲಕ್ಷ ಮತಗಳು ಸೇರಿ ಹತ್ತು ಲಕ್ಷ ಮತಗಳು ಸಿಗುತ್ತವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅವರ ಅಭಿಪ್ರಾಯ ಹೇಳುವ ಅಧಿಕಾರ ಆಗುತ್ತೆ. ಆದರೆ ಅಭ್ಯರ್ಥಿ ಘೋಷಣೆ ಆಗುವ ಮುಂಚೆ ಆಡುವ ಮಾತುಗಳಿಗೆ ಮಹತ್ವ ಕೊಡಬೇಕಿಲ್ಲ. ಅಭ್ಯರ್ಥಿ ಘೋಷಣೆ ನಂತರ ಕಾರ್ಯಕರ್ತರು ಏನು ಮಾಡುತ್ತಾರೆ ಅನ್ನೋದನ್ನ ನೋಡಬೇಕು ಎಂದು ಅಗರ್ವಾಲ್ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಭಾವನೆ ಎಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ತಲುಪಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಯಾರು ಆಗುತ್ತಾರೆ ಅನ್ನೋದನ್ನ ಬಿಜೆಪಿ ತೀರ್ಮಾನಿಸಲ್ಲ. ಅದನ್ನು ಜೆಡಿಎಸ್ ತೀರ್ಮಾನಿಸುತ್ತೆ. ಜೆಡಿಎಸ್ ಯಾರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತದೆಯೋ ಅವರ ಪರವಾಗಿ ಬಿಜೆಪಿಯ ಎಲ್ಲಾ ಶಾಸಕರು, ಕಾರ್ಯಕರ್ತರು ಪೂರ್ಣ ಶಕ್ತಿಯೊಂದಿಗೆ ಕೆಲಸ ಮಾಡ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ ಗೆಲ್ಲುವುದಿಲ್ಲ ಎಂದು ಅಭ್ಯರ್ಥಿಗಳಿಗೆ ಗೊತ್ತಾಗಿದೆ. ಆದ್ದರಿಂದ ಸಿದ್ದರಾಮಯ್ಯ ಮಂತ್ರಿಗಳನ್ನು ಕರೆದು ನಿಮ್ಮ ಮಕ್ಕಳನ್ನು ನಿಲ್ಲಿಸಿ ಗೆಲ್ಲಿಸಬೇಕು. ಇಲ್ಲವಾದಲ್ಲಿ ನಿಮ್ಮನ್ನು ಮಂತ್ರಿ ಮಂಡಲದಿಂದ ವಜಾ ಮಾಡ್ತಿನಿ ಅಂತ ಧಮ್ಕಿ ಹಾಕಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿಯಿಂದ ಸಚಿವರು ತಮ್ಮ ಮಕ್ಕಳು ಚುನಾವಣೆಗೆ ನಿಲ್ಲಿಸಿದ್ದಾರೆ. ಹಾಗಾಗಿ ಈ ಚುನಾವಣೆ ಮನೆಯಲ್ಲಿ ಕುಳಿತು ಗೆಲ್ಲಬಹುದಾದ ಯುದ್ದ ಎಂದು ಬಿಜೆಪಿ ಕಾರ್ಯಕರ್ತರಿಗೆ ಗೊತ್ತಿದೆ.

28 ಕ್ಕೆ 28 ಸೀಟ್ ಗೆದ್ದು ಮೋದಿಜಿಯವರಿಗೆ ಅರ್ಪಿಸುತ್ತೇವೆ. ಜೂನ್.4 ನಂತರ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನೀನು ನನ್ನ ಅಭ್ಯರ್ಥಿ ಸೋಲಿಸಿದೆ ಎಂದು ಹೊಡೆದಾಡುತ್ತಾರೆ. ಬಿಜೆಪಿಯ ಒಬ್ಬ ಅಭ್ಯರ್ಥಿ ಸೋಲುವುದಿಲ್ಲ. ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಸ್ಪರ್ಧಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಸಿ.ಎನ್.ಮಂಜುನಾಥ್ ಗಾಳಿ ಬೀಸುತ್ತಿದೆ. ಡಿ.ಕೆ.ಸುರೇಶ್ ಠೇವಣಿ ಕಳೆದುಕೊಳ್ಳುವಾಗ ಡಿ.ಕೆ.ಶಿವಕುಮಾರ್ ಬೇರೆ ಯಾರನ್ನು ಗೆಲ್ಲಿಸುತ್ತಾರೆ. ಕಳೆದ ಚುನಾವಣೆಯಲ್ಲಿ ಅವರು ಎಷ್ಟು ಹಣ ಖರ್ಚು ಮಾಡಿದ್ದಾರೆ ಗೊತ್ತಿದೆ. ಈ ಬಾರಿ ಅದರ ಹತ್ತುಪಟ್ಟು ಹಣ ಖರ್ಚು ಮಾಡಿದರೂ ಠೇವಣಿ ಕಳೆದುಕೊಳ್ಳುವುದನ್ನು ತಪ್ಪಿಸಲು ಆಗಲ್ಲ. ಈ ಭಾರಿ ಜನರು ಸಿ.ಎನ್.ಮಂಜುನಾಥ್ ಅವರ ಪರ ನಿಂತಿದ್ದಾರೆ.

ಭಾರತೀಯ ಜನತಾ ಪಾರ್ಟಿ ಯಾವುದೇ ಸರ್ಕಾರವನ್ನು ಅಸ್ಥಿರಗೊಳಿಸಲ್ಲ. ಕಾಂಗ್ರೆಸ್‌ನೊಳಗೆ ವಿರೋಧಗಳಿವೆ, ಗುಂಪುಗಳ ನಡುವೆ ದ್ವೇಷವಿದೆ. ಅವರಿಗೆ ಬಿಜೆಪಿಗಿಂತಲೂ ಅವರವರ ನಡುವೆ ದ್ವೇಷವಿದೆ. ಹೀಗಿರುವಾಗ ನಾವ್ಯೇಕೆ ಸರ್ಕಾರವನ್ನು ಅಸ್ತಿರಗೊಳಿಸಲಿ ಚುನಾವಣೆ ನಂತರ ಸರ್ಕಾರವೇ ಪತನವಾಗಲಿದೆ. ಸಾಯುತ್ತಿರುವವರನ್ನು ಸಾಯಿಸುವ ಅಗತ್ಯ ನಮಗಿಲ್ಲ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪರಿಸ್ಥಿತಿ ಹದಗೆಡಲಿದೆ. ಸರ್ಕಾರ ಬೀಳಿಸಿದ ಕೆಟ್ಟ ಹೆಸರನ್ನು ಹೊರಲು ನಾವು ಸಿದ್ದರಿಲ್ಲ ಎಂದು ಅಗರ್ವಾಲ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್

ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

- Advertisement -

Latest Posts

Don't Miss