Sunday, December 22, 2024

Latest Posts

ಕಡು ಬಡವರಿಗೆ ಸೂರು, ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ: ಎಸ್.ಟಿ.ಸೋಮಶೇಖರ್

- Advertisement -

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಡವರಿಗೆ ಸೂರು ಕಲ್ಪಿಸುವ ದೃಷ್ಟಿಯಿಂದ 8. ಗ್ರಾಮಗಳ ವ್ಯಾಪ್ತಿಯಲ್ಲಿ 18 ಸಾವಿರ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚಿಕ್ಕಲೂರು, ನೆಲಗುಳಿ, ದೇವಗೆರೆಯಲ್ಲಿ ಮನೆಗಳು ಹಂಚಿಕೆಗೆ ಸಿದ್ಧವಾಗಿದೆ ಎಂದರು.

ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೂ ಒತ್ತು ನೀಡಲಾಗಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ಸ್ತ್ರೀ ಶಕ್ತಿ ಸಂಘಗಳನ್ನು ಉಚಿತವಾಗಿ ನೋಂದಾಯಿಸಿ, ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಯಾವುದಾದರೂ ಒಂದೇ ಒಂದು ಅಭಿವೃದ್ಧಿ ಕಾರ್ಯ ಮಾಡಿದ್ದರೆ ತಿಳಿಸಿ ಎಂದು ಪ್ರಶ್ನಿಸಿದರು.

ಯಶವಂತಪುರದ ಜನತೆ ಯಾರು ಕೆಲಸ ಮಾಡುತ್ತಾರೆ? ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ? ಎಂಬುದನ್ನು ಗಮನಿಸಿ ಮತ ನೀಡುತ್ತಾರೆ. ಕೇವಲ ಕಣ್ಣೀರಾಕಿದಾಕ್ಷಣ ಮತದಾರರು ಕರಗುವುದಿಲ್ಲ. ಅವರು ಬುದ್ಧಿವಂತರಿದ್ದಾರೆ ಎಂದರು.

ಜೆಡಿಎಸ್ ಅಭ್ಯರ್ಥಿ ಐದು ವರ್ಷದಲ್ಲಿ ಕೇವಲ ಎರಡು ತಿಂಗಳು ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಅದೂ ಚುನಾವಣೆ ಘೋಷಣೆಯಾಗುವಾಗ. ಉಳಿದ ದಿನಗಳಲ್ಲಿ ಕ್ಷೇತ್ರದ ಜನರು ನೆನಪಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

‘ಭಜರಂಗದಳ, ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿ ತೂಗುತ್ತಿದ್ದೀರಿ. ನಿಮ್ಮ ವಿನಾಶ ಕಾದಿದೆ. ‘

ಹಿಂದೂ, ಮುಸಲ್ಮಾನ್ ‌ಮುಖಂಡರನ್ನ ಒಟ್ಟಿಗೆ ಸಭೆ ಕರೆದು ಮಾತನಾಡಿದ ಪ್ರೀತಂ ಆಡಿಯೋ ವೈರಲ್..

- Advertisement -

Latest Posts

Don't Miss