Wednesday, April 23, 2025

Latest Posts

ಬಜೆಟ್ ಮಂಡನೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ತಿಳಿಸಿದ ಬಿಜೆಪಿ ನಾಯಕ ಸೋಮಶೇಖರ್

- Advertisement -

Political News: ಸಿಎಂ ಸಿದ್ದರಾಮಯ್ಯ ಈ ವರ್ಷದ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಇರುವ ಸಾಲವನ್ನು ಮತ್ತಷ್ಟು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಸಾಲದ ಶೂಲ ಸಾಲರಾಮಮಯ್ಯ ಎಂದು ಟೀಕಿಸಿದ್ದಾರೆ.

ಆದರೆ ಬಿಜೆಪಿ ನಾಯಕ ಎಸ್‌.ಟಿ.ಸೋಮಶೇಖರ್ ಮಾತ್ರ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿ ಹೊಗಳಿದ್ದಾರೆ. ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. ಅದಕ್ಕಾಗಿ ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಹೀಗೆ ಪ್ರತಿಕ್ರಿಯಿಸಿದ ವೇಳೆ, ಬಿಜೆಪಿಯ ಕೆಲ ನಾಯಕರು ಈ ಬಜೆಟ್‌ನ್ನು ಟೀಕಿಸುತ್ತಿದ್ದಾರಲ್ಲಾ ಎಂದು ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, ಉತ್ತರಿಸಿದ ಸೋಮಶೇಖರ್, ನಾನು ಬಜೆಟ್‌ನ್ನು ಟೀಕಿಸುವವರ ಬಗ್ಗೆ ಹೇಳಿಕೆ ಕೊಡಲು ಇಷ್ಟಪಡುವುದಿಲ್ಲ ಎಂದಿದ್ದಾರೆ. ಟೀಕೆ ಮಾಡುವುದು ಅವರ ವೈಯಕ್ತಿಕ ವಿಚಾರ. ಆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನನ್ನ ಪ್ರಕಾರ ಬಜೆಟ್ ಉತ್ತಮವಾಗಿದೆ ಎಂದಿದ್ದಾರೆ.

ಸೋಮಶೇಖರ್ ಹಲವು ತಿಂಗಳುಗಳಿಂದ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡುತ್ತಿದ್ದು, ಬಿಜೆಪಿ ಕಾರ್ಯಕ್ರಮಗಳಿಗೆ ಗೈರಾಗುತ್ತಿದ್ದಾರೆ. ಪಕ್ಷದ ಕಾರ್ಯಚಟುವಟಿಗೆಳಲ್ಲೂ ಸೋಮಶೇಖರ್ ಭಾಗವಹಿಸುತ್ತಿಲ್ಲ.

- Advertisement -

Latest Posts

Don't Miss