ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಉಮೇಶ್, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯುಪಿ ಸಿಎಂ ಯೋಗಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಮಂಡ್ಯದಲ್ಲಿ ಬಿಜೆಪಿಯಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಸೂಕ್ತವಲ್ಲ.ಮಾಜಿ ಸಿಎಂ ಎಂದು ಸಿದ್ದರಾಮಯ್ಯ ಗೆ ಗೌರವ ಇದೆ ಅದನ್ನ ಉಳಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಅಲ್ಲದೇ, ಇಬ್ರಾಹಿಂ ಅವರು ಯೋಗಿ ಆದಿತ್ಯ ನಾಥ ಅವರ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹಾಗೂ ಇಬ್ರಾಹಿಂ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೊಡುತ್ತಿದ್ದೇವೆ. ಇನ್ನು ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್ ಬಿಜೆಪಿ ಮುಖಂಡ ಅಶೋಕ್ ಜಯರಾಮ್ ಜಿಲ್ಲಾ ವಕ್ತಾರ ಸಿಟಿ ಮಂಜು ಉಪಸ್ಥಿತರಿದ್ದರು.