Saturday, July 12, 2025

Latest Posts

ಲೋಕಸಭೆ ಚುನಾವಣೆಗಾಗಿ ಹುಬ್ಬಳ್ಳಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಬಿಜೆಪಿ ನಾಯಕರು

- Advertisement -

Hubli News: ಹುಬ್ಬಳ್ಳಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರೆಲ್ಲಾ ಒಟ್ಟುಗೂಡಿ ಸಭೆ ನಡೆಸಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಣಿ ಸಭೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಸಚಿವ ಮುನೇನಕೊಪ್ಪ ಗೈರಾಗಿದ್ರು. ಈ ನಡೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

ಆದ್ರೆ ನಿನ್ನೆ ತಡರಾತ್ರಿವರೆಗೂ ಜಗದೀಶ್ ಶೆಟ್ಟರ್ ಮತ್ತು ಜೋಶಿ ಸೇರಿ ಹಲವು ಬಿಜೆಪಿ ನಾಯಕರು ಮೀಟಿಂಗ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ, ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ನಾಯಕರು ಮೀಟಿಂಗ್ ಮಾಡಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಂದಾಗುವ ಸಲಹೆ ನೀಡಿದ್ದಾರೆ.

ತಡರಾತ್ರಿ ನಡೆದ ಮೀಟಿಂಗ್ ‌ನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಮ್ ಜಗದೀಶ್ ಶೆಟ್ಟರ್,ಮಾಜಿ ಸಚಿವ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ್ ಮಹೇಶ್ ಟೆಂಗಿನಕಾಯಿ, ಎಮ್ ಆರ್ ಪಾಟೀಲ್,ಬಿಜೆಪಿ ನಗರ ಘಟಕದ ಅದ್ಯಕ್ಷ ತಿಪ್ಪಣ್ಣ ಮಜ್ಜಗಿ,ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್ ಈರಣ್ಣ ಸವಡಿ ಭಾಗಿಯಾಗಿದ್ದರು.

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು

ರಾಜ್ಯಕ್ಕೆ ಅನ್ಯಾಯವಾಗಿದರೂ ಒಬ್ಬ ಸಂಸದರೂ ಧ್ವನಿ ಎತ್ತಿಲ್ಲ- ಡಿಸಿಎಂ ಡಿ.ಕೆ.ಶಿವಕುಮಾರ್..!

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ; ಉಸ್ತುವಾರಿಗಳನ್ನು ನೇಮಕ ಮಾಡಿದ ಜೆಡಿಎಸ್

- Advertisement -

Latest Posts

Don't Miss