Tuesday, May 28, 2024

Latest Posts

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

- Advertisement -

Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ರಾಜಕೀಯವಾಗಿ ಪ್ರಬುದ್ಧರಾಗಿರುವವರು. ಯಾವುದು ಸರಿ, ತಪ್ಪು ಎನ್ನುವ ಬಗ್ಗೆ ಅರಿವು ಹೊಂದಿದವರು. ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳು ಹಾಗೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss