www.karnatakatv.net: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರು ಬಿಜೆಪಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ.
ಈ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಈಗ ಸಿಂದಗಿಯಲ್ಲಿ ಬಿಜೆಪಿ ಮುನ್ನುಗ್ಗಿ ಮುನ್ನಡೆಯನ್ನು ಸಾಧಿಸಿದೆ. ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್‌ನಿoದ ಅಶೋಕ್ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂಧಗಿ ಮತ ಎಣಿಕೆ ಕಾರ್ಯದಲ್ಲಿ ಪ್ರತಿ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಗಳಿಸಿದ್ದರು. 20ನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 93,865 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನು ಪಡೆದಿದ್ದು, ಹಾಗೇ ಜೆಡಿಎಸ್ ಅಭ್ಯರ್ಥಿ ನಾಜೀಯಾ ಅಂಗಡಿ 4353 ಮತಗಳನ್ನು ಪಡೆದುಕೊಂಡಿದ್ದಾರೆ. ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಚಲಾವಣೆಯಾದ ಒಟ್ಟು ಮತಗಳ ಪೈಕಿ ಅರ್ಧ ಮತಗಳನ್ನು ಪಡೆದಿರುವ ಬಿಜೆಪಿ ಅಭ್ಯರ್ಥಿ ಗೆಲುವಿನ ಮಾಲೆ ಧರಿಸಲಿದ್ದು, ಇನ್ನೂ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.