Friday, November 22, 2024

Latest Posts

Punjab ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ..!

- Advertisement -

ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು, ಬೇಳೆಕಾಳುಗಳು, ಮತ್ತು ಎಣ್ಣೆ ಕಾಳುಗಳಿಗೆ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ವಿಸ್ತರಣೆ ಮಾಡುವ ಭರವಸೆಯನ್ನು ಸಹ ನೀಡಲಾಗಿದೆ. ರಾಜ್ಯದ ಪ್ರತಿಯೊಬ್ಬ ಭೂರಹಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆ(Prime Minister Kisan pays homage)ಯಡಿ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದೆ. ರಾಜ್ಯದಲ್ಲಿ ಒಂದು ಲಕ್ಷ ಎಕರೆ ‘ಶಾಮಲತ್ ಭೂಮಿ’ಯನ್ನು ಗ್ರಾಮೀಣ ಭೂರಹಿತ ರೈತರಿಗೆ ಸಾಗುವಳಿ ಮಾಡಲು ಹಂಚಿಕೆ ಮಾಡಲಾಗುವುದು. ಬೆಳೆ ವೈವಿಧ್ಯತೆಯನ್ನು ಉಳಿಸಿಕೊಳ್ಳಲು ಮತ್ತು ಅದನ್ನು ಹೆಚ್ಚು ಲಾಭದಾಯಕವಾಗಿಸಲು ಬಿಜೆಪಿ ಮೈತ್ರಿಯು ಕೃಷಿಗಾಗಿ 5,000 ಕೋಟಿ ರೂಪಾಯಿಗಳ ಪ್ರತ್ಯೇಕ ವಾರ್ಷಿಕ ಬಜೆಟ್ ಮಂಡಿಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ಹೇಳಿದೆ.

- Advertisement -

Latest Posts

Don't Miss