Thursday, December 4, 2025

Latest Posts

ಪೂಜೆ ಮುಗಿಸಿ ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಕಾರು ಡಿಕ್ಕಿ

- Advertisement -

Political News: ಪೂಜೆ ಮುಗಿಸಿ ಬರುತ್ತಿದ್ದ ವೇಳೆ ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್‌ಗೆ ಇನ್ನೊಂದು ಕಾರು ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ರಾಜೇಶ್ ನಾಯ್ಕ್‌ಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜೇಶ್ ನಾಯ್ಕ್ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ, ಪೂಜೆ ಮುಗಿಸಿಕೊಂಡು ಬರುತ್ತಿದ್ದರು. ಆಗ ಮಂಗಳೂರಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ. ರಾಜೇಶ್ ನಾಯ್ಕ್ ನಡೆದುಕೊಂಡು ಬರುತ್ತಿದ್ದ ವೇಳೆ, ಮೂಡಬಿದಿರೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರ್, ರಾಜ್ ನಾಯ್ಕ್ ಕಾಲಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಾಜೇಶ್ ಬಿದ್ದಿದ್ದಾರೆ. ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕ್ಕ ಚಿಕಿತ್ಸೆ ಮಾಡಿ, ಮನೆಗೆ ಕಳುಹಿಸಲಾಗಿದೆ.

ಇನ್ನು ತಾನು ಮಾಡಿದ ತಪ್ಪಿಗೆ ಕ್ಷಮೆ ಕೇಳುವುದು ಬಿಟ್ಟು, ಎಸ್ಕೇಪ್ ಆಗಹೊರಟಿದ್ದ ಕಾರ್‌ನಲ್ಲಿದ್ದವರನ್ನು, ಗುರುಪುರದ ಬಳಿ, ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಬಜ್ಪೆ ಪೊಲೀಸರು ಆ ಕಾರ್ ಚಾಲಕನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಏರ್ ಇಂಡಿಯಾ ವೆಜ್ ಊಟದಲ್ಲಿ ಚಿಕನ್ ಪೀಸ್ ಪ್ರತ್ಯಕ್ಷ..

ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

ವಿಹೆಚ್‌ಪಿಯಿಂದ ಅಮಿತ್ ಷಾಗೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

- Advertisement -

Latest Posts

Don't Miss