- Advertisement -
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ.



ರಾಮ್ ಸ್ವರೂಪ್ ಶರ್ಮಾ, ಪತ್ನಿ ಮತ್ತು ತಮ್ಮ ಮೂವರು ಮಕ್ಕಳೊಂದಿಗೆ ದೆಹಲಿಯ ಗೊಮತಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ಇದೇ ಫ್ಲ್ಯಾಟ್‌ನಲ್ಲಿ ಶರ್ಮಾ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಡಿ ಜಿಲ್ಲೆಯ ಜಲ್‌ಪೇಹರ್ ಗ್ರಾಮದ ರಾಮ್ ಸ್ವರೂಪ್ ಎರಡು ಬಾರಿ ಸಂಸದರಾಗಿದ್ದರು. 2014ರಲ್ಲಿ ಮೊದಲ ಬಾರಿ ಸಂಸತ್ ಪ್ರವೇಶ ಮಾಡಿದ್ದ ರಾಮ್ ಸ್ವರೂಪ್ 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮರು ಆಯ್ಕೆಯಾಗಿದ್ದರು.
- Advertisement -