Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ. ಪ್ರತಾಪ್ ಸಾರಂಗಿ ತಲೆಗೆ ಪೆಟ್ಟಾಗಿ ರಕ್ತ ಸುರಿದಿದ್ದು, ಇವರಿಗೆ ಬಿಜೆಪಿ ಸಂಸದ ಡಾ. ಮಂಜುನಾಥ್ ಚಿಕಿತ್ಸೆ ನೀಡಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿರುವ ಪ್ರತಾಪ್ ಸಾರಂಗಿ, ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಓರ್ವ ಸಂಸದನನ್ನು ತಳ್ಳಿದ್ದು, ಆ ಸಂಸದ ನನ್ನ ಮೇಲೆ ಬಂದು ಬಿದ್ದ ಕಾರಣ, ನನಗೆ ಪೆಟ್ಟಾಗಿದೆ ಎಂದು ಹೇಳಿದ್ದಾರೆ. ಈ ಆರೋಪಕ್ಕೆ ಉತ್ತರಿಸಿರುವ ರಾಹುಲ್ ಗಾಂಧಿ, ನಾನು ಸಂಸತ್ ಒಳಗೆ ಹೋಗಲು ಪ್ರಯತ್ನಿಸುತ್ತಿದ್ದೆ. ಈ ವೇಳೆ ನಮ್ಮನ್ನು ತಡೆಯುವ ಪ್ರಯತ್ನ ನಡೆದಿದೆ. ಹಾಗಾಗಿ ತಳ್ಳಾಟ, ನೂಕಾಾಟ ನಡೆದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.