ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ
ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆಯು ರಾಜಧಾನಿಯ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರಾರಂಭವಾಗಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಒತ್ತಿ ಹೇಳಿದರು ಮತ್ತು 2023 ಮತ್ತು 2024 ರಲ್ಲಿ ಒಂದೇ ಒಂದು ಚುನಾವಣೆಯಲ್ಲಿ ಸೋಲಬೇಡಿ ಎಂದು ಹೇಳಿದರು. ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನ. ಇಂದು ಪ್ರಧಾನಿ ನರೇಂದ್ರ ಮೋದಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
‘ಕೋಲಾರದ ಜನ ಬುದ್ದಿವಂತರು.. ಅವರಿಗೆ ತಕ್ಕ ಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ’

