Sunday, May 19, 2024

Latest Posts

ನೇಹಾ ಹ* ಕೇಸ್ ಬೆನ್ನಲ್ಲೇ ಹುಬ್ಬಳ್ಳಿಗೆ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

- Advertisement -

Political News: ಒಂದು ಕಡೆ ಲೋಕಸಭೆ ಚುನಾವಣಾ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದೆಡೆ ನೇಹಾ ಹತ್ಯೆ ಪ್ರಕರಣದ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಏಪ್ರಿಲ್ 21ರಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸುತ್ತಿದ್ದಾರೆ. ಈಗಾಗಲೇ ನೇಹಾ ಹತ್ಯೆ ಖಂಡಿಸಿ ರಾಜ್ಯದಲ್ಲಿ ಜನರು ಆಕ್ರೋಶಗೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜೆಪಿ ನಡ್ಡಾ ಅವರು ವಾಣಿಜ್ಯ ನಗರಿಗೆ ಭೇಟಿ ನೀಡುತ್ತಿದ್ದಾರೆ.

ನೇಹಾ ಕೊಲೆಗೆ ಒಕ್ಕೂರಲ ಖಂಡನೆ ವ್ಯಕ್ತವಾಗಿದೆ. ಕೊಲೆ ಪ್ರಕರಣ ಖಂಡಿಸಿ ಮಠಾಧೀಶರು ಮತ್ತು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಮತ್ತೊಂದೆಡೆ ವಿವಿಧ ರಾಜಕಾರಣಿಗಳು, ಮಠಾಧೀಶರು ಮತ್ತು ನಾಗರೀಕರು ನೇಹಾ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿದ್ದಾರೆ. ಆರೋಪಿಯನ್ನು ಕೊಲ್ಲಬೇಕು ಎಂಬ ಆಗ್ರಹ ವ್ಯಕ್ತವಾಗುತ್ತಿದೆ. ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಳೆ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದಾರೆ.

ನಡ್ಡಾ ಹುಬ್ಬಳ್ಳಿ ಭೇಟಿ ವಿವರ ಹೀಗಿದೆ
ನಾಳೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಜೆಪಿ ನಡ್ಡಾ ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಎರಡು ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, 2 ರಿಂದ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ಮಾಡಲಿದ್ದಾರೆ.

ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ನಡ್ಡಾ, ಪ್ರಲ್ಹಾದ್ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ. 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾತ್ರಿ 9 ಗಂಟೆಗೆ ಡೆನಿಸನ್ ಹೋಟೆಲ್ನಲ್ಲಿ ಕೋರ್ ಕಮೀಟಿ ಸಭೆ ಮಾಡಲಿದ್ದಾರೆ.

ವಿದ್ಯಾರ್ಥಿನಿ ನೇಹಾ ಸಾವಿಗೆ ಕರುನಾಡು ಮರುಗಿದೆ. ರಾಜ್ಯದ ಮೂಲೆ ಮೂಲೆಗಳಿಂದಲೂ ಆಗಮಿಸಿದ ಜನ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ವಿವಿಧ ಮಠಾಧೀಶರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಘಟನೆಯನ್ನು ಖಂಡಿಸಿದರು. ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರ ಪ್ರತಿಭಟನೆ ನಡೆಯಿತು. ಮತ್ತೊಂದೆಡೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಕೆಲಕಾಲ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡಿದರು. ನಂತರ ಬಿ ವಿ ಕಾಲೇಜು ಬಳಿಯೂ ಪ್ರತಿಭಟನೆ ಮಾಡಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಇದೆ ವೇಳೆ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ವಿವಿಧ ಮಠಾಧೀಶರು ರಾಜಕಾರಣಿಗಳು ಮತ್ತು ಜನತೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ದಿಂಗಾಲೇಶ್ವರ ಶ್ರೀ, ಜಯಮೃತ್ಯುಂಜಯ ಸ್ವಾಮೀಜಿ, ಮುರುಘಾಮಠದ ಶ್ರೀ, ವಚನಾನಂದ ಸ್ವಾಮೀಜಿ ಸೇರಿ ಹಲವು ಮಠಾಧೀಶರು ಹಿರೇಮಠ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು: ಚಕ್ರವರ್ತಿ ಸೂಲಿಬೆಲೆ

ವಿಧಾನಸಭೆ ಸೋಲನ್ನ ಬದಿಗಿಡೋಣ.. ಲೋಕಸಭೆಯಲ್ಲಿ Modi ಗೆಲ್ಲಿಸೋಣ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ 28 ಸ್ಥಾನ ಸೋತರೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಖುಷಿ: ಬಿ.ವೈ.ವಿಜಯೇಂದ್ರ

- Advertisement -

Latest Posts

Don't Miss