Thursday, April 17, 2025

Latest Posts

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

- Advertisement -

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು. ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ, ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಿಲ್ಲ ಎಂದು ಆಕ್ಷೇಪಿಸಿದರು.

ನಮ್ಮ ಹೋರಾಟದ ಮುಂದುವರೆದ ಭಾಗವಾಗಿ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ದದ್ದಲ್ ಅಷ್ಟೇ ಅಲ್ಲ, ಮಾನ್ಯ ಮುಖ್ಯಮಂತ್ರಿಗಳೂ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿದೆ ಎಂದು ಆಗ್ರಹಿಸಿದರು.

ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಹಣಕಾಸಿನ ಸಚಿವರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತದ, ಅಂದರೆ, 187 ಕೋಟಿ ರೂ.ಗಳ ಹಗರಣ ನಡೆಯಲು ಅಸಾಧ್ಯ ಎಂದು ತಿಳಿಸಿದರು.

ನಿನ್ನೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗಿದೆ ಎಂದ ಅವರು, ಈ ಹಗರಣದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆದಿದೆ. ಅಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲಿ ಹಲವಾರು ಅಂಶಗಳು ಇವೆ. ಆದರೆ, ರಾಜ್ಯ ಸರಕಾರ ಈ ಪ್ರಕರಣವನ್ನು ಇನ್ನೂ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು.

- Advertisement -

Latest Posts

Don't Miss