Hubli News: ಹುಬ್ಬಳ್ಳಿ: ಬಿವ್ಹಿಬಿ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕಾರ್ಪೋರೆಟರ್ ಮಗಳ ದಾರುಣ ಹತ್ಯೆಗೆ ರಾಜ್ಯಕ್ಕೆ ರಾಜ್ಯವೇ ಸಾಕಷ್ಟು ಕಂಬನಿ ಮಿಡಿದಿದೆ. ಅಲ್ಲದೇ ಅದೆಷ್ಟೋ ಹೋರಾಟ ಪ್ರತಿಭಟನೆಗಳು ನಡೆದಿವೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಹೋರಾಟ ಮಾತ್ರ ಮುಂದುವರೆದಿದೆ.
ಹೌದು..ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗುತ್ತಿದೆ. ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಅಮರ್ ರಹೇ ನೇಹಾ ಹಿರೇಮಠ ಅಮರ್ ರಹೇ ಎಂದು ಘೋಷಣೆ ಕೂಗಿದರು.
ಇನ್ನೂ ಸಿಎಂ ವಿರುದ್ಧ ಸಿದ್ರಾಮುಲ್ಲಾಖಾನ್ ಗೆ ದಿಕ್ಕಾರ,ಡಿಕೆ ಬ್ರದರ್ಸ್ ದಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದು,ಡೌನ್ ಡೌನ್ ಕಾಂಗ್ರೆಸ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..
ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ