Thursday, August 21, 2025

Latest Posts

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ- BYV

- Advertisement -

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು. ತಮ್ಮ ಬೆಂಬಲಕ್ಕೆ ಸಚಿವರು, ಶಾಸಕರು ನಿಲ್ಲುತ್ತಾರೆ ಎನ್ನೋ ಭಂಡತನ ಬಿಡಿ. ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಆಗ್ರಹಿಸಿದ್ರು.


ಬಿಜೆಪಿ-ಜೆಡಿಎಸ್ ಎರಡೂ ಪಕ್ಷ ಒಂದಾಗಿ ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿವೆ. ನಮ್ಮ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಸಿಎಂ ಮೇಲೆ ವಿರುದ್ಧ ಅನೇಕ ಭ್ರಷ್ಟಾಚಾರ ಹಗರಣ ಆರೋಪಗಳು ಕೇಳಿ ಬಂದಿವೆ. ಸಿಎಂ‌ ವಿರುದ್ಧ ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೋದು ಬಿಟ್ಟು, ಬೆಂಬಲಿಗರು ಹಾಗೂ ಹೈಕಮಾಂಡ್ ಜೊತೆ ಸೇರಿ ಗೂಂಡಾಗಿರಿ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

- Advertisement -

Latest Posts

Don't Miss