Thursday, December 12, 2024

Latest Posts

Kangana On Farmers Protest: ರೈತ ಹೋರಾಟವನ್ನು ನಿಭಾಯಿಸದಿದ್ರೆ ಭಾರತ ಬಾಂಗ್ಲಾ ಆಗುತ್ತಿತ್ತು: ಕಂಗನಾ ಹೇಳಿಕೆಗೆ ಬಿಜೆಪಿ ಗರಂ

- Advertisement -

ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್​ ಖಾತೆಯಲ್ಲಿ ವಿಡಿಯೋ ಅಪ್​ಲೋಡ್​ ಮಾಡಿರುವ ಕಂಗನಾ ರಣಾವತ್, ಕೇಂದ್ರ ಸರ್ಕಾರವು ರೈತ ಹೋರಾಟವನ್ನು ನಿಗ್ರಹಿಸುವ ಸಂಬಂಧ ಕಠಿಣ ನಿಲುವುಗಳನ್ನ ಕೈಗೊಂಡಿತು. ಇಲ್ಲವಾಗಿದ್ದರೆ ಬಾಂಗ್ಲಾ ದೇಶದಲ್ಲಿ ವಿದ್ಯಾರ್ಥಿಗಳ ಹೋರಾಟ ಆ ದೇಶದ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡಿದಂತೆ ಭಾರತದಲ್ಲೂ ಹಾದಿ ತಪ್ಪುವ ಸಾಧ್ಯತೆ ಇತ್ತು. ಅಲ್ಲದೆ ದೇಶದಲ್ಲಿ ನಡೆದ ರೈತರ ಪ್ರತಿಭಟನೆಗೆ ವಿದೇಶಿ ಶಕ್ತಿಗಳೇ ಕಾರಣ ಅಂತ ಆರೋಪಿಸಿದ್ದಾರೆ.

ಕಂಗನಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ:
ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಪಕ್ಷ ಅಂತರ ಕಾಯ್ದುಕೊಂಡಿದೆ. ಕಂಗನಾ ರಣಾವತ್ ಅವರ ಹೇಳಿಕೆ ವೈಯಕ್ತಿಕವಾದದ್ದು. ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ಇದು ಬಿಜೆಪಿ ನಾಯಕತ್ವದ ಅಧಿಕೃತ ನಿಲುವಲ್ಲ ಎಂದು ಭಾರತೀಯ ಜನತಾ ಪಕ್ಷ ಸ್ಪಷ್ಟನೆ ನೀಡಿದೆ. ಅಲ್ಲದೆ, ಕಂಗನಾ ರಣಾವತ್ ಅವರ ನಿಲುವು ಬಿಜೆಪಿ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ ಎಂದು ಮೂಲಕ ಕಂಗನಾ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನು ಸಂಸದೆ ಕಂಗನಾ ವಿವಾದಿತ ಹೇಳಿಕೆಗೆ ಬಿಜೆಪಿಯಲ್ಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರಲ್ಲೂ ಹರಿಯಾಣ ಬಿಜೆಪಿ ನಾಯಕರು ಕಂಗನಾ ರಣಾವತ್​ ವಿರುದ್ಧ ಬಹಿರಂಗವಾಗೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಕಂಗನಾ ಅವರ ಈ ಹೇಳಿಕೆಯು ಹರಿಯಾಣ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ರೈತ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಇಂತಹ ವಿವಾದಿತ ಹೇಳಿಕೆಗಳು ಬಿಜೆಪಿಯ ಮತಗಳ ಮೇಲೆ ಪ್ರಭಾವ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಸಂಸದರು ಇಂತಹ ಹೇಳಿಕೆಗಳನ್ನು ನೀಡುವ ಅಗತ್ಯವಿಲ್ಲ. ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ವರ್ಚಸ್ಸಿಗೆ ಡ್ಯಾಮೇಜ್​ ಮಾಡುತ್ತಿರುವ ಕಂಗನಾ ರಣಾವತ್ ಕುರಿತು ಪಕ್ಷದ ವರಿಷ್ಠರ ಜೊತೆ ಚರ್ಚೆ ನಡೆಸುವುದಾಗಿ ಹರಿಯಾಣ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss