Sunday, November 9, 2025

Latest Posts

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

- Advertisement -

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು ಆರೋಪಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿರುವ ಬಗ್ಗೆ ಅವರು ಸ್ವತಃ ಬಹಿರಂಗವಾಗಿ ಹೇಳಿದ್ದಾರೆ. 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಇಂತಹ ಬೆದರಿಕೆ ಒಡ್ಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ತಮ್ಮ ವಿಚಾರಧಾರೆಗೆ ವಿರೋಧ ವ್ಯಕ್ತಪಡಿಸುವವರನ್ನು ಗುರಿಯಾಗಿಸಿ ತೊಂದರೆ ನೀಡುವ ಪ್ರವೃತ್ತಿ ಹೆಚ್ಚಿದೆ ಎಂದರು.

ಮುಖ್ಯಮಂತ್ರಿ ಬದಲಾವಣೆಯ ಕುರಿತು ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಅವರು ತಳ್ಳಿಹಾಕಿದರು. ಇದು ಕೆಲ ಮಾಧ್ಯಮಗಳ ಟಿಆರ್‌ಪಿ ಆಟ. ಯಾರಿಗಾದರೂ ಮೈಕ್ ನೀಡಿ ಹೇಳಿಸಿದ ಮಾತುಗಳನ್ನು ಸತ್ಯದಂತೆ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಪಕ್ಷದ ಒಳಗಲ್ಲಿ ಮುಖ್ಯಮಂತ್ರಿಯ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಯೂ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಔತಣ ಕೂಟದ ಬಗ್ಗೆ ಅವರು, ಅದರಲ್ಲೇನೂ ವಿಶೇಷವಿಲ್ಲ. 3ರಿಂದ 6 ತಿಂಗಳಿಗೊಮ್ಮೆ ಇಂತಹ ಕಾರ್ಯಕ್ರಮಗಳು ರೂಢಿಯಂತೆ ನಡೆಯುತ್ತವೆ. ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಕುರಿತು ಅಲ್ಲಿ ಯಾವುದೇ ಚರ್ಚೆಯೂ ಆಗಿಲ್ಲ. ಈ ಸಂಬಂಧ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಯವರೇ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೆಗೆದುಕೊಳ್ಳುತ್ತಾರೆ ಎಂದರು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss