Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ ತಗುಲಿದೆ ಕಪ್ಪು ಚುಕ್ಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜೀನಾಮೆ ನೀಡಿ ತಮ್ಮ ನೈತಿಕತೆ ಪ್ರದರ್ಶಿಸಲಿ, ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸಚಿವರ ರಾಜೀನಾಮೆ ಪಡೆಯಲಿ ಎಂದು ಒತ್ತಾಯಿಸುತ್ತೇನೆ. ಭಂಡತನ ಅಂಟಿಸಿಕೊಂಡಿರುವ ಈ ಸರ್ಕಾರ ಈ ವಿಚಾರದಲ್ಲಿ ಮೀನಾಮೇಷ ಎಣಿಸಿದರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಶಿಕ್ಷಣ ಮೌಲ್ಯಕ್ಕೆ ಅಪಚಾರ ಎಸಗಿದಂತಾಗುತ್ತದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ ತಗುಲಿದೆ ಕಪ್ಪು ಚುಕ್ಕೆಯಾಗಿದೆ.
ಶಿಕ್ಷಣ ಸಚಿವ @Madhu_Bangarapp ಅವರು ರಾಜೀನಾಮೆ ನೀಡಿ ತಮ್ಮ ನೈತಿಕತೆ ಪ್ರದರ್ಶಿಸಲಿ, ಇಲ್ಲವೇ ಮುಖ್ಯಮಂತ್ರಿ @siddaramaiah…— Vijayendra Yediyurappa (@BYVijayendra) December 29, 2023
‘ಪ್ರಣವಾನಂದ ಸ್ವಾಮೀಜಿ ಅಲ್ಲ ಸ್ವಾಮೀಜಿನೇ ಅಲ್ಲ. ನಾನು ತಲೆಕಟ್ಟೋರಿಗೆ ಉತ್ತರ ಕೊಡಲ್ಲ’
ಕೊಬ್ಬರಿಗೆ ಬೆಲೆ ಏರಿಕೆ: ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ