Tuesday, May 30, 2023

Latest Posts

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

- Advertisement -

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ. ಇದು ಎಲ್ಲಾ ಸಮೀಕ್ಷೆಗಳಲ್ಲಿಯೂ ಸ್ಪಷ್ಟವಾಗಿದೆ. ಮೊದಲಿಗೆ ಇದನ್ನ ಯಾರೂ ನಂಬಿರಲಿಲ್ಲ. ಆದ್ರೀಗ ನಮ್ಮ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. 

‘ಉಪಚುನಾವಣೆಯಲ್ಲೂ ಬಿಜೆಪಿಗೆ ಜಯ’

ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಜಯ ಸಾಧಿಸಲಿದೆ. 10 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಮೇ23ರಂದು ಈ ವಾಸ್ತವಿಕ ಸತ್ಯ ಎಲ್ಲರಿಗೂ ತಿಳಿಯಲಿದೆ ಅಂತ ಯಡಿಯೂರಪ್ಪ ಹೇಳಿದ್ದಾರೆ.

- Advertisement -

Latest Posts

Don't Miss