ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆಗಾಗಿ ರಾಜ್ಯ ಬಿಜೆಪಿ ತಾಂತ್ರಿಕ ಸಭೆಗಳನ್ನು ಆಯೋಜಿಸಿದೆ. ಪಕ್ಷದ ಸಂಘಟನೆ ಮತ್ತು ಕಾರ್ಯತಂತ್ರಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಈ ಸಭೆ ಪ್ರಮುಖವಾಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ B Y ವಿಜಯೇಂದ್ರ ಅಧ್ಯಕ್ಷತೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಜನವರಿ 5ರಂದು ಜಗನ್ನಾಥ ಭವನದಲ್ಲಿ ನಡೆಯಲಿದೆ.
ಜನವರಿ 13ರವರೆಗೆ ರಾಜ್ಯ ಕೋರ್ ಕಮಿಟಿ ಸದಸ್ಯರ ಉಪಸ್ಥಿತಿಯಲ್ಲಿ ಜಿಲ್ಲಾ ಮಟ್ಟದ ಸಭೆಗಳನ್ನೂ ನಡೆಸಲಾಗುವುದು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ N.S. ನಂದೀಶ್ ರೆಡ್ಡಿ ತಿಳಿಸಿದ್ದಾರೆ. ಈ ಸಭೆಗಳಲ್ಲಿ ಪಕ್ಷದ ಸಂಘಟನಾತ್ಮಕ ವಿಷಯಗಳು, ಸಂಘಟನೆಯ ಬಲವರ್ಧನೆ ಹಾಗೂ ಮುಂಬರುವ ಚಟುವಟಿಕೆಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜ.5 ರಂದು ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಚಾಮರಾಜನಗರ, ಮೈಸೂರು ನಗರ ಮತ್ತು ಗ್ರಾಮಾಂತರ. ಜ.6 ರಂದು ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ. ಜ.7 ಕ್ಕೆ ಕಲಬುರಗಿ ನಗರ ಮತ್ತು ಗ್ರಾಮಾಂತರ ಯಾದಗಿರಿ, ಚಿಕ್ಕಮಗಳೂರು, ತುಮಕೂರು.
ಜ.8ಕ್ಕೆ ಮಂಗಳೂರು, ವಿಜಯಪುರ, ಹಾಸನ, ರಾಮನಗರ. ಜ.9ಕ್ಕೆ ಬೀದರ್, ಉತ್ತರ ಕನ್ನಡ, ಕೋಲಾರ, ಮಧುಗಿರಿ. ಜ.10ಕ್ಕೆ ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ. ಜ.12ಕ್ಕೆ ಉಡುಪಿ, ಕೊಡಗು, ಬೆಂಗಳೂರು ಗ್ರಾಮಾಂತರ. ಜ.13ಕ್ಕೆ ವಿಜಯನಗರ, ಗದಗ, ಹಾವೇರಿ, ಶಿವಮೊಗ್ಗ ದಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.
ವರದಿ: ಲಾವಣ್ಯ ಅನಿಗೋಳ




