Saturday, January 18, 2025

Latest Posts

ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿದ ಬಿಜೆಪಿ, 5 ಗಂಟೆ ಪ್ರತಿಭಟನೆ ಧರಣಿ ನಡೆಸಿ ಆಕ್ರೋಶ

- Advertisement -

Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರ ರಾಜ್ಯ ಸರ್ಕಾರ ಕಸೆದುಕೊಳ್ಳುಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಸೇರೀ ಪದಾಧಿಕಾರಿಗಳು ಪ್ರತಿಭಟನೆ ದರಣಿ ನಡೆಸಿ ಆಕ್ರೋಶ ಹೊರಹಾಕಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನ‌ ಸೌಧದ ಮುಂಭಾಗದಲ್ಲಿ ಮುಂಜಾನೆ 10 ಗಂಟೆಯಿಂದ ಮಧ್ಯಾಹ್ನ ಎರಡು ಗಟೆಯವರೆಗೆ ಪ್ರತಿಭಟನೆ ನಡೆಸಿದ ಬಿಜೆಪಿ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಜಿಲ್ಲಾ ಘಟಕ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರದಿಂದ ಪಾಲಿಕೆಗೆ ಬಿಡುಗಡೆ ಮಾಡಬೇಕಾದ ಅನುದಾನವನ್ನು ಸರಿಯಾಗಿ ನೀಡುತ್ತಿಲ್ಲ. ಮಹಾನಗರ ಪಾಲಿಕೆಗಳಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ಈ ಮೂಲಕ ಬಿಜೆಪಿ ಆಡಳಿತವಿರೋ ಪಾಲಿಕೆಗಳ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಅಧಿಕಾರ ಕಸಿಯು ಯತ್ನ ಸರ್ಕಾರ ಮಾಡುತ್ತಿದೆ. ಈ ಕೂಡಲೇ ಇಂತಹ ಆಲೋಚನೆಯನ್ನು ಬಿಟ್ಟು, ರಾಜ್ಯ ಸರ್ಕಾರ ಪಾಲಿಕೆಗಳಿಗೆ ಸರ್ಕಾರದಿಂದ ಸಿಗಬೇಕಾದ ಅನುದಾನ ಸೇರಿ ಇತರೆ ಎಲ್ಲವನ್ನು ನೀಡಬೇಕು ಎಂದು ಆಗ್ರಹಿಸಿದರು. ‌ಒಂದು ವೇಳೆ ನೀಡದಿದ್ದಲ್ಲಿ ಉಗ್ರ ಹೋರಾಟದ ಕಡೆಗೆ ಹೆಜ್ಜೆ ಇಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.

- Advertisement -

Latest Posts

Don't Miss