Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ.
ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ. ಇದ್ರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆ ವಿಚಾರದ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು,ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ್ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್ ನವರು ಎಂದು ಹೇಳಿದ್ದಾರೆ.
ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಿಚಾರದ ಬಗ್ಗೆ ಹೆಬ್ಬಾಳ್ಕರ್ ಮಾತನಾಡಿದ್ದು, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ ನಾಲ್ಕು ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸ್ತೇವೆ ಎಂದಿದ್ದಾರೆ.
ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರದ ಬಗ್ಗೆ ಹೆಬ್ಬಾಳ್ಕರ್ ಮಾತನಾಡಿದ್ದು, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನು ಗಮನಿಸಿ ಸೂಕ್ತ ಕ್ರಮ ಕ್ರಮ ಕೈಗೊಳ್ಳುತ್ತಾರೆ. ಎಲ್ಲರ ಅಭಿಪ್ರಾಯ ಪಡೆದೇ ಅಭ್ಯರ್ಥಿ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.
ಬೆಳಗಾವಿ ಲೋಕಸಭೆಗೆ ತಮ್ಮ ಪುತ್ರನಿಗೆ ಟಿಕೆಟ್ ಕೇಳಿರುವ ವಿಚಾರದ ಬಗ್ಗೆ ಮಾತನಾಡಿರುವ ಹೆಬ್ಬಾಳ್ಕರ್, ನನ್ನ ಸಹೋದರ ಚೆನ್ನರಾಜ ಹಟ್ಟಿಹೊಳಿ ಸಹ ಟಿಕೆಟ್ ಕೇಳಿರಲಿಲ್ಲ. ಜಿಲ್ಲೆಯ ಮುಖಂಡರು ಸೂಕ್ತ ಅಭ್ಯರ್ಥಿ ಅಂದಾಗ ಅಖಾಡಕ್ಕಿಳಿದರು. ಪ್ರತಿಕೂಲ ವಾತಾವರಣದಲ್ಲಿಯೂ ಗೆದ್ದು ಬಂದರು. ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಕೊಟ್ಟಿದ್ದಾನೆ. ಟಿಕೆಟ್ ಕೊಡಲೇಬೇಕು ಅಂತ ನಾನು ಎಲ್ಲಿಯೂ ಒತ್ತಾಯಿಸಿಲ್ಲ. ಹೈಕಮಾಂಡ್ ಮತ್ತು ಜಿಲ್ಲೆಯ ಮುಖಂಡರ ತೀರ್ಮಾನಕ್ಕೆ ನಾನು ಬದ್ಧ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್