Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.
ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣವೇನು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿಗೆ ಹೆಚ್ಚಿನ ಸ್ಥಾನ ಬಂದಿದ್ದರೂ ಕೂಡ, ಗೆಲುವು ಸಾಧಿಸಲು ಬೇಕಾದಷ್ಟು ಸ್ಥಾನವಿರಲಿಲ್ಲ. ಹಾಗಾಗಿ ಕಾಂಗ್ರೆಸ್ ಮತ್ತು ಪಕ್ಷೇತರರು ಸೇರಿ, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ್ದರು. ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಬಂಡಾಯ ಎದ್ದು, ಬಿಜೆಪಿಗೆ ಹೋಗಿದ್ದು, ಅವರೊಂದಿಗೆ ಹಲವು ಶಾಸಕರು ಕೂಡ ಬಿಜೆಪಿಗೆ ಬಂದಿದ್ದರು. ಹಾಗಾಗಿ ಆಪೇರಷನ್ ಕಮಲವಾಗಿ, ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಿತ್ತು. ಇದೀಗ ಮತ್ತೆ ಬಿಜೆಪಿ ಸರ್ಕಾರವೇ ಗೆಲುವು ಸಾಧಿಸಿದೆ.
ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಸೇರಿ ಹಲವು ರಾಷ್ಟ್ರೀಯ ಬಿಜೆಪಿ ನಾಯಕರು ಮಧ್ಯಪ್ರದೇಶಕ್ಕೆ ಭೇಟಿ ನೀಡಿ, ಪ್ರಚಾರ ಮಾಡಿದ್ದರು. ಇದೀಗ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಕುತೂಹಲವಿದೆ.
‘ಕಾಂಗ್ರೆಸ್ ನಲ್ಲಿ ಪೊಲ್ಯೂಷನ್ ಜಾಸ್ತಿಯಾಗಿದೆ. ಪಾರಿವಾಳಗಳು ಹಾರಿ ಹೋಗುವ ಕಾಲ ಬರ್ತಿದೆ’