Political News: ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು. ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ ಜನರ ಹಕ್ಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನರೇಂದ್ರ ಮೋದಿ , ಬಸವರಾಜ್ ಬೊಮ್ಮಾಯಿ , ಅಶೋಕ್ , ಬಿ.ವೈ.ವಿಜಯೇಂದ್ರ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು. ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಹೊಸ ಸುಳ್ಳು ಹಬ್ಬಿಸಿದರು. ಆದರೆ ನಾವು ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಟ್ಟೆವು. ಹೀಗಾಗಿ ಬಿಜೆಪಿಯ ಈ ಮಾತು ಕೂಡ ಸುಳ್ಳಾಯಿತು. ಹೀಗೆ ಬಿಜೆಪಿ ಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ನರೇಂದ್ರ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದ್ದಾರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಆಸ್ಪತ್ರೆ, ಕಾಲೇಜು, ಮಾರುಕಟ್ಟೆ, ರಸ್ತೆ, ನೀರು ಸೇರಿ ಮೈಸೂರಿನ ಎಲ್ಲಾ ಪ್ರಗತಿ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನ ನೀಡುತ್ತಲೇ ಬಂದಿದೆ. ಈ ಬಜೆಟ್ ನಲ್ಲೂ ಹಣ ಮೀಸಲಿಟ್ಟಿದ್ದೇವೆ. ಮೈಸೂರು ಜಿಲ್ಲೆಯ ಅಭಿವೃದ್ಧಿಗೆ- ಮೈಸೂರು ಜನರ ಪ್ರಗತಿಗೆ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು.
ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ… pic.twitter.com/re9NS4jKqa— Siddaramaiah (@siddaramaiah) March 15, 2024
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು @narendramodi, @BSBommai, @RAshokaBJP, @BYVijayendra ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು.
ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಹೊಸ ಸುಳ್ಳು ಹಬ್ಬಿಸಿದರು. ಆದರೆ ನಾವು ಬಜೆಟ್… pic.twitter.com/0Ci8hOkPbX— Siddaramaiah (@siddaramaiah) March 15, 2024
ನಾವು ನುಡಿದಂತೆ ನಡೆದಿದ್ದೇವೆ, @BJP4India ಸುಳ್ಳುಗಳನ್ನೇ ನುಡಿದಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ @narendramodi ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದ್ದಾರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ… pic.twitter.com/nELF0nOpCY
— Siddaramaiah (@siddaramaiah) March 15, 2024
ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ