Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ ಅಥಾರಿಟಿ ನಮಗೆ ಇಲ್ಲ. ಅದೆಲ್ಲದಕ್ಕೂ ಮುದ್ರೆ ಒತ್ತಲು ಹೈ ಕಮಾಂಡ್ ಇದೆ. ಹಾಸನದಲ್ಲಿ ಮಾತ್ರವಲ್ಲದೆ ರಾಜ್ಯದ ವಿವಿಧ ಮೂಲೆಗಳಲ್ಲಿಯೂ ಅಹಿಂದ್ ಸಮಾವೇಶ ಮಾಡಲಾಗುತ್ತದೆ. ಇದು ಯಾವುದೇ ಒಬ್ಬ ವ್ಯಕ್ತಿಗತವಾದಂತ ಸಮಾವೇಶ ಅಲ್ಲ. ಕಾಂಗ್ರೆಸ್ ಬ್ಯಾನರ್ ಅಡಿಯಲ್ಲಿ ಕಾಂಗ್ರೆಸ್ ಪಕ್ಷವೇ ಮಾಡುವ ಸಮಾವೇಶ ಎಂದು ಸಚಿವರು ಹೇಳಿದ್ದಾರೆ.
ಸಿಎಂ ಅವಧಿಯ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಈ ಐದು ವರ್ಷವೋ..? ಮುಂದಿನ ಐದು ವರ್ಷವೂ ಗೊತ್ತಿಲ್ಲ. ಆದರೆ ಸಿಎಂ ಬದಲಾವಣೆಗೆ ಸಿಎಂ ಖುರ್ಚಿ ಖಾಲಿ ಇಲ್ಲ. ಅಲ್ಲದೆ ಜೆಡಿಎಸ್, ಬಿಜೆಪಿ ಪಕ್ಷದಲ್ಲಿಯೂ ಸಿಎಂ ಬದಲಾವಣೆ ಆಗಿವೆ. ಆದರೆ ನಮ್ಮ ಪಕ್ಷದ ನಿರ್ಧಾರದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.