ಕಾಂಗ್ರೆಸ್‌ನ್ನು ಅಧಿಕಾರದಿಂದ ಕೆಳಗಿಳಿಸಿ, ವಿಧಾನಸೌಧದಿಂದ ಹೊರ ಕಳಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ: ವಿಜಯೇಂದ್ರ

Political News: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಠಿಸಿದೆ ಎಂದು ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು

ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

About The Author