- Advertisement -
Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್‌ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದ್ದು, ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಗಿದೆ. ಈ ಸಂಭ್ರಮಾಚರಣೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹಾಗೂ ಶಾಸಕ ಮಹೇಶ ತೆಂಗಿನಕಾಯಿ ಭಾಗಿಯಾಗಿದ್ದರು.
ಬಿಜೆಪಿ ಕಾರ್ಯಕರ್ತರು ಮೋದಿ ಪರ, ಬಿಜೆಪಿ ಪರ ಘೋಷಣೆ ಕೂಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
- Advertisement -