ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ನಗರದ ಒನಕೆ ಓಬವ್ವ ಸರ್ಕಲ್ನಲ್ಲಿ ಸೇರಿದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಬಿಜಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಬಿ.ವೈ.ವಿಜಯೇಂದ್ರ ಸೇರಿ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, ಹಣಕಾಸು ಖಾತೆ ಜವಾಬ್ದಾರಿ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಾರದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಆಗಿಲ್ಲ. ಹೀಗಾಗಿ ಪ್ರಕರಣದ ಜವಾಬ್ದಾರಿ ಹೊತ್ತು ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಹಗರಣ- ವಿಜಯೇಂದ್ರ ನೇತೃತ್ವದಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
- Advertisement -
- Advertisement -