Saturday, May 25, 2024

Latest Posts

ನಮ್ಮನ್ನು ವಿರೋಧಿಸುವ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ನಮ್ಮ ಯೋಜನೆಗಳ ಫಲಾನುಭವಿಗಳು: ಸಿಎಂ

- Advertisement -

Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಸಿಎಂ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ,  ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿದಂತೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ , ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರ್‌ನಾಥ್,, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ, ಸೇರಿ ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರು, ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸ್ಥಳೀಯ ನಾಯಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ವರುಣಾದ ಜನರಿಂದ ನಾನು ಎರಡು ಬಾರಿ ಮುಖ್ಯಮಂತ್ರಿಯಾದೆ. ಈಗಲೂ ನನಗೆ ಮತ ನೀಡುತ್ತಿರುವುದು ಎಂದು ಭಾವಿಸಿ ನಮ್ಮ ಅಭ್ಯರ್ಥಿಗೆ ಮತ ನೀಡಿ. ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಅವರನ್ನು ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ ಎಂದು ಮನವಿ ಮಾಡುತ್ತೇನೆ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ, ನನ್ನ ರಾಜಕೀಯ ಶಕ್ತಿಯೂ ಹೆಚ್ಚುತ್ತದೆ. ಇದಕ್ಕೆ ನೀವೆಲ್ಲರೂ ಬೆಂಬಲಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ನಮ್ಮ ಕಾಂಗ್ರೆಸ್ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಹಣವೂ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

ಹುಟ್ಟುಹಬ್ಬಕ್ಕೆ ಅನ್ನದಾನ, ಪ್ರಚಾರ ಮಾಡಬೇಡಿ ಎಂದ ನಟಿ ಸಾರಾ ಅಲಿ ಖಾನ್

ರಾಜರಾಜೇಶ್ವರಿಯ ಆಶೀರ್ವಾದದೊಂದಿಗೆ ಪ್ರಚಾರ ಕಾರ್ಯ ಆರಂಭಿಸಿದ ಡಿಸಿಎಂ ಡಿಕೆಶಿ

- Advertisement -

Latest Posts

Don't Miss