Sunday, December 22, 2024

Latest Posts

ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Political News: ಸಂವಿಧಾನ ಬದಲಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸುಮಾರು ಬಾರಿ ಹೇಳಿದ್ದಾರೆ. ನಿನ್ನೆ ಅದನ್ನೇ ಪುನರುಚ್ಛರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಹಲವು ನಾಯಕರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಸಂವಿಧಾನ ನಮಗೆ ಭಗವದ್ಗೀತೆ ಇದ್ದಂತೆ. ಬಿಜೆಪಿಯವರು ಅಂತಹ ಸಂವಿಧಾನವನ್ನೇ ಬದಲಾಯಿಸುವ ಮಾತನಾಡುತ್ತಿದ್ದಾರೆ. ಕರ್ನಾಟಕದ ಮತದಾರರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆ ನೋಡಿದರೆ ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಂತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ. ಕರ್ನಾಟಕದ ಮತದಾರರೇ ಎಚ್ಚರದಿಂದಿರಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss