Sunday, July 6, 2025

Latest Posts

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

- Advertisement -

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ ನಂತರ ಎನ್ ಇಸಿಯ ಮೊದಲ ಸಭೆ ಇದಾಗಿದೆ. ಸಭೆಯ ಬಗ್ಗೆ ಎನ್‌ಇಸಿ ಸದಸ್ಯರಿಗೆ ಪತ್ರದಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, ‘ಬಿಜೆಪಿಯ ಎನ್‌ಇಸಿ ಸಭೆಯನ್ನು ನವೆಂಬರ್ 7 ರಂದು ದೆಹಲಿಯಲ್ಲಿ ನಿಗದಿಪಡಿಸಲಾಗಿದೆ. ಸಭೆಯು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ. ಸಭೆಯ ಸ್ಥಳ ಎನ್‌ಡಿಎಂಸಿ ಕನ್ವೆಂಷನ್ ಸೆಂಟರ್ ಆಗಿದ್ದು, ಸಭೆಯು ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ಉದ್ಘಾಟನಾ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ ಮತ್ತು ಪ್ರಧಾನಿ ಮೋದಿಯವರು ಭಾಷಣವನ್ನು ಮಾಡಲಿದ್ದಾರೆ’ ಎಂದು ತಿಳಿಸಿದ್ದಾರೆ. ಹಾಗೇ ಇದೇ ಸಂದರ್ಭದಲ್ಲಿ ಭಾಷಣ, ಸಂತಾಪ ಸೂಚಕ ನಿರ್ಣಯವನ್ನು ಹೇಳಲಿದ್ದು, ಮುಂಬರುವ ವಿಧಾನ ಸಭೆ ಚುನಾವಣೆಯ ಬಗ್ಗೆ ಕೂಡಾ ಚರ್ಚೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

- Advertisement -

Latest Posts

Don't Miss