Political News: ಇಂದು ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರ್ತೀನಿ. ಬಂಡೆಯ ಹಾಗೆ ನಮ್ಮ ಸರ್ಕಾರ ಗಟ್ಟಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಬಹುಪರಾಕ್ ಹೇಳಿದ್ದರು.
ಇದೀಗ ಇದೇ ಹೇಳಿಕೆ ಬಗ್ಗೆ ಬಿಜೆಪಿ ಕೆಲ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿಎಂ ಈ ಹೇಳಿಕೆಯಿಂದಲೇ ಡೌಟ್ ಬರುತ್ತಿದೆ. ಇದೇ ಹೇಳಿಕೆಯಿಂದ ಇವರ ಸರ್ಕಾರ ಹೆಚ್ಚು ದಿನ ನಿಲ್ಲಲ್ಲ ಅಂತಾ ತಿಳಿಯುತ್ತಿದೆ ಅಂತೆಲ್ಲ ಹೇಳಿದ್ದಾರೆ. ಇಂಥ ಹೇಳಿಕೆಗೆ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ತಿರುಗೇಟು ನೀಡಿದ್ದಾರೆ.
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ. ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸಿಎಂ ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.