ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ.
ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಪ್ರಕರಣ ಮತ್ತು ಅದಕ್ಕೆ ಬೆಂಬಲವಾಗಿ ಬಿಜೆಪಿ ನಾಯಕರ ಮದ್ದೂರಿಗೆ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದರು. ಸಿಎಂ, ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಹೊರ ರಾಜ್ಯಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನನಗೆ ಸಂಪೂರ್ಣ ಮಾಹಿತಿ ಸಿಗದೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಬಿಜೆಪಿಯವರು ರಾಜಕಾರಣವಲ್ಲದೆ ಬೇರೆ ಯಾವ ಕೆಲಸ ಮಾಡುತ್ತಿದ್ದಾರೆ? ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬಾಕಿ ಇರುವ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಮತಿಗಳನ್ನು ತೆಗೆದುಕೊಂಡು ಬರುವುದು ಅವರ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಬೆಂಗಳೂರು ನಗರ ಶಾಸಕರ ಜೊತೆ ಸಿಎಂ ಸಭೆಯ ಕುರಿತು ಕೇಳಿದಾಗ, ಮಂಗಳವಾರದ ನಿಗದಿತ ಸಭೆಯನ್ನು ನಾನು ಕೊಯಮತ್ತೂರಿಗೆ ಹೋಗಬೇಕಿರುವ ಕಾರಣ ಮುಂದೂಡುವಂತೆ ತಿಳಿಸಿದ್ದಾರೆ. ಬುಧವಾರ ಸಂಜೆ ಸಭೆ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.
GBA ಅಡಿಯಲ್ಲಿ ರಚನೆಯಾಗಿರುವ ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಕೂಡ ಮಾತನಾಡಿರು. ಸಚಿವರು ತಮ್ಮ ಕ್ಷೇತ್ರಗಳ ಕೆಲಸಗಳ ಜೊತೆಗೆ ಇಡೀ ಜಿಲ್ಲೆಯ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗುತ್ತದೆ. ಕೆಲವು ಕ್ಷೇತ್ರಗಳಲ್ಲಿ ಪಕ್ಷ ಸೋತಿರುವುದರಿಂದ ಆ ಭಾಗಗಳಲ್ಲಿ ಸಮನ್ವಯತೆ ಹಾಗೂ ಶ್ರದ್ಧೆ ಹೆಚ್ಚಿಸುವುದಾಗಿ ಹೇಳಿದರು.
ಅದರ ಜೊತೆಗೆ, ಜವಾಹರ್ ಬಾಲ ಮಂಚ್ ವತಿಯಿಂದ ಸುಮಾರು 24 ಮಕ್ಕಳನ್ನು ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರೀಯ ಶಿಬಿರಕ್ಕೆ ಕಳುಹಿಸಲಾಗುತ್ತಿದೆ. ಅವರ ಪ್ರಯಾಣ ವೆಚ್ಚವನ್ನು ಅವರು ಸ್ವತಃ ಭರಿಸಿ ಕಳುಹಿಸುತ್ತಿದ್ದಾಗಿ ಸಂತೋಷ ವ್ಯಕ್ತಪಡಿಸಿದರು.
ವರದಿ : ಲಾವಣ್ಯ ಅನಿಗೋಳ




