Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿದ್ದು, ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಬಿ.ಕೆ.ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿಯಲ್ಲ. ಬಿ. ಕೆ. ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಲೆಕ್ಕಕ್ಕೆ ಇಲ್ಲದ ನಾಯಕ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡತಾ ಇದ್ದಾರೆ. ಅವರಿಗೆ ಬಹಳ ಬೆಲೆ ಕೊಡಬೇಕಾಗಿಲ್ಲ. ದೇಶಕ್ಕೆ ಯಾರು ಏನು ಅಂತಾ ಗೊತ್ತು ಎಂದು ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ಬಿಜೆಪಿಯವರು ಬ್ರಿಟಿಷ್ ಬೂಟ್ ನೆಕ್ಕುವವರು ಎಂಬ ಹೇಳಿಕೆಗೆ ಗೋವಿಂದ ಕಾರಜೋಳ ಕಿಡಿ ಕಾರಿದ್ದು, ಹರಿಪ್ರಸಾದ್ ಒಬ್ಬ ಹಿರಿಯ ರಾಜಕಾರಣಿ. ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು. ಅವರು ಮಾತು ಅವರಿಗೆ ಗೌರವ ತರಲ್ಲ. ಅವರು ದೊಡ್ಡವರು ಆಗಲ್ಲ. ಅವರ ವ್ಯಕ್ತಿತ್ವ ಬೆಳೆಯಲ್ಲ. ಚಪ್ಪಲಿ, ಬೂಟು ನೆಕ್ಕುವುದು ಎಂಬ ಹೇಳಿಕೆ ಸರಿಯಲ್ಲ. ಸಜ್ಜನರಿಗೆ ಆದರ್ಶವಾಗಿರಬೇಕು. ಅವರ ಹೀನ ಸಂಸ್ಕ್ರತಿ ತೋರಿಸುತ್ತದೆ ಎಂದು ಹೇಳಿದ್ದಾರೆ.
ಕಳ್ಳತ ಕೈಯಲ್ಲಿ ಬಿಜೆಪಿ ನಾಯಕರು ಕೊಟ್ಟಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೋವಿಂದ ಕಾರಜೋಳ, ಬಸನಗೌಡ ಪಾಟೀಲ್ ಯತ್ನಾಳ ಒಬ್ಬ ಹಿರಿಯರು. ಪಕ್ಷದ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಗೌರವ ಕೊಡಬೇಕು. ಯುವಕರಿಗೆ ಆದ್ಯತೆ ಕೊಡಬೇಕು ಅಂತಾ ಮಾಡಿದ್ದಾರೆ. ನಾವು ಎಲ್ಲರೂ ಮಾರ್ಗದರ್ಶನ ಮಾಡಬೇಕು. ನಾನು ಎಲ್ಲ ನಾಯಕರ ಪರವಾಗಿ ಕೇಳಿಕೊಳ್ಳುವೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಕಾರಜೋಳ ಹೇಳಿದ್ದಾರೆ.
ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗತಾರೆ ಎಂಬ ವಿಚಾರದ ಬಗ್ಗೆ ಗೋವಿಂದ ಕಾರಜೋಳ ಮಾತನಾಡಿದ್ದು, ಯಾವುದೇ ಕಾರಣಕ್ಕೂ ಸೋಮಣ್ಣ ಕಾಂಗ್ರೆಸ್ ಸೇರಲ್ಲ. ಕಾಂಗ್ರೆಸ್ ಮುಳುಗುವ ಹಡಗು. ಪಂಚ ರಾಜ್ಯ ಚುನಾವಣೆ ಬಳಿಕೆ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ. ಇನ್ನು ಇಂಡಿಯಾ ಒಕ್ಕೂಟ ವ್ಯವಸ್ಥೆಯಲ್ಲಿಯೇ ಸರಿಯಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಅಂತಾ ಚರ್ಚೆ ಆದಾಗ. ಇನ್ನಷ್ಟು ಬಿರುಕು ಇಂಡಿಯಾ ಒಕ್ಕೂಟದಲ್ಲಿ ಬಿಟ್ಟಿದೆ. ಲೋಕಸಭಾ ಚುನಾವಣೆ ಬರುವುದರೊಳಗಾಗಿ ಇಂಡಿಯಾ ಛಿದ್ರವಾಗಿ ಹೋಗುತ್ತದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.
ಲೋಕಸಭೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ – ಸಚಿವ ಸಂತೋಷ್ ಲಾಡ್
ಕಿವಿಗೆ ಪೆಟ್ಟು ಬೀಳುವಷ್ಟು ಕೆಟ್ಟದಾಗಿ ಪತ್ನಿಗೆ ಹೊಡೆದ್ರಾ ವಿವೇಕ್ ಬಿಂದ್ರಾ..?
ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್