BMTC, ಬ್ಯಾಂಕ್ ಆಫ್ ಬರೋಡಾ ಹೊಸ ಒಪ್ಪಂದ – ವಿಮೆ ಹೆಚ್ಚಳ!

ಬಿಎಂಟಿಸಿ ನೌಕರರ ಭದ್ರತೆಗೆ ಸಂಬಂಧಿಸಿದ ಮಹತ್ವಪೂರ್ಣ ಹೆಜ್ಜೆಯನ್ನು ಸರ್ಕಾರ ಮತ್ತು ಬ್ಯಾಂಕ್ ಆಫ್ ಬರೋಡಾ ಕೈಗೊಂಡಿದೆ. ಬಿಎಂಟಿಸಿ ನೌಕರರು, ದಿನದಿಂದ ದಿನಕ್ಕೆ ಸಾವಿರಾರು ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಗಳಿಗೆ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ.

ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುತ್ತಿರುವಾಗ, ಅನಾಹುತ ಸಂಭವಿಸಿದರೆ ಅವರ ಕುಟುಂಬವು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತದೆ. ಇದನ್ನು ಮನಗಂಡು ಬಿಎಂಟಿಸಿ ಮತ್ತು ಬ್ಯಾಂಕ್ ಆಫ್ ಬರೋಡಾ ಈಗ ಹೊಸ ಒಡಂಬಡಿಕೆಗೆ ಸಹಿ ಹಾಕಿವೆ.

ಈ ಹೊಸ ಒಪ್ಪಂದದ ಮೂಲಕ, ಬಿಎಂಟಿಸಿ ನೌಕರರಿಗೆ ಈಗ ₹1.25 ಕೋಟಿ ರೂಪಾಯಿ ಅಪಘಾತ ವಿಮಾ ಪರಿಹಾರ ಲಭ್ಯವಾಗಲಿದೆ. ಹಿಂದಿನ ಪರಿಹಾರ ಮೊತ್ತವು ₹1 ಕೋಟಿ ರೂಪಾಯಿಯಾಗಿದ್ದು, ಇದೀಗ ಅದನ್ನು ಹೆಚ್ಚಿಸಿ ₹1.25 ಕೋಟಿಯನ್ನಾಗಿ ಮಾಡಲಾಗಿದೆ. ಇದು ಒಂದು ವರ್ಷದ ಅವಧಿಗೆ ಜಾರಿಗೆ ಬರುವ ಒಪ್ಪಂದವಾಗಿದೆ.

ನೂತನ ಒಪ್ಪಂದದಂತೆ ನಿಗಮದ ನೌಕರರು ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ ಆರ್ಥಿಕ ಭದ್ರತೆ ಒದಗಿಸಲು 1 ಕೋಟಿ ರು. ವಿಮಾ ಪರಿಹಾರ ನೀಡಲಾಗುತ್ತಿದೆ. ಅದನ್ನು 1.25 ಕೋಟಿ ರು.ಗೆ ಹೆಚ್ಚಿಸುವ ಉದ್ದೇಶದೊಂದಿಗೆ ಮುಂದಿನ ೫ ವರ್ಷಕ್ಕಾಗಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಶಾಂತಿನಗರದ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಈ ಮಹತ್ವಪೂರ್ಣ ಒಡಂಬಡಿಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮ್ಮುಖದಲ್ಲಿ ಬ್ಯಾಂಕ್ ಆಫ್ ಬರೋಡಾ ಮತ್ತು ಬಿಎಂಟಿಸಿ ಹಿರಿಯ ಅಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿದರು.

ಇಂತಹ ಯೋಜನೆಗಳು ಮಾತ್ರವಲ್ಲದೆ, ನೌಕರರ ಆರೋಗ್ಯ, ಸುರಕ್ಷತೆ ಮತ್ತು ಮಾನಸಿಕ ಸಮಾಧಾನಕ್ಕೆ ಸಂಬಂಧಿಸಿದ ಇನ್ನೂ ಹಲವಾರು ಯೋಜನೆಗಳು ಜಾರಿಯಾಗಬೇಕಿದೆ.

ವರದಿ : ಲಾವಣ್ಯ ಅನಿಗೋಳ

About The Author