- Advertisement -
state news :
ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಬೈಕ್ ಸವಾರನಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಹಿಂದಿನಿಂದ ಬರ್ತಿದ್ದ ಬಸ್ ಏಕಾಏಕಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರನ ಯಾವುದೇ ಗುರುತು ಪತ್ತೆಯಾಗಿಲ್ಲ, ಇನ್ನೂ ಈ ಪ್ರಕರಣ ಸುಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -