Saturday, July 27, 2024

Latest Posts

ಬೋಟ್ ಕಂಪೆನಿಯಿಂದ ಹೊಸ ಸ್ಮಾರ್ಟ್ ವಾಚ್…!

- Advertisement -

Technology News:

ಬೋಟ್‌ ಕಂಪೆನಿ ಭಾರತದಲ್ಲಿ ಹೊಸ ಬೋಟ್‌ ಸ್ಟಾರ್ಮ್‌ ಪ್ರೊ ಕಾಲ್‌ ಸ್ಮಾರ್ಟ್‌ವಾಚ್‌ ಲಾಂಚ್‌ ಮಾಡಿದೆ ಎಂದು ತಿಳಿದು ಬಂದಿದೆ. ಇದು 100 ಕ್ಲೌಡ್-ಆಧಾರಿತ ವಾಚ್‌ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಫ್ಲೂಯಿಡ್ UI ಮತ್ತು ASAP ಚಾರ್ಜ್ ವೇಗದ ಚಾರ್ಜಿಂಗ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ದಿನವಿಡೀ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್‌ ಮಾಡುವ 700 ಕ್ಕೂ ಹೆಚ್ಚು ಆಕ್ಟಿವ್‌ ಮೋಡ್‌ಗಳನ್ನು ಹೊಂದಿದೆ ಎನ್ನಲಾಗಿದೆ.

ಹೆಸರೇ ಸೂಚಿಸುವಂತೆ ಈ ಸ್ಮಾರ್ಟ್‌ವಾಚ್‌ ಬ್ಲೂಟೂತ್‌ ಕಾಲ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ವಾಚ್‌ 60Hz ರಿಫ್ರೆಶ್ ರೇಟ್‌ ಬೆಂಬಲಿಸುವ 1.78 ಇಂಚಿನ 2.5D ಕರ್ವ್ಡ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 100 ಕ್ಲೌಡ್-ಆಧಾರಿತ ವಾಚ್ ಫೇಸ್‌ಗಳಿಗೆ ಬೆಂಬಲವನ್ನು ನೀಡಲಿದೆ ಎನ್ನಲಾಗಿದೆ.ಈ ಸ್ಮಾರ್ಟ್‌ವಾಚ್‌ ಅನ್ನು ಧರಿಸುವವರಿಗೆ 10 ಕಂಟ್ಯಾಕ್ಟ್‌ಗಳನ್ನು ಸೇವ್‌ ಮಾಡುವುದಕ್ಕೆ ಅವಕಾಶವನ್ನು ನೀಡಲಾಗಿದೆ. ಇದಲ್ಲದೆ ಇದರಲ್ಲಿ ಇಂಟರ್‌ಬಿಲ್ಟ್‌ ಸ್ಪೀಕರ್ ಮತ್ತು ಮೈಕ್ರೊಫೋನ್‌ ಕೂಡ ನೀಡಲಾಗಿದೆ.

ಇದರಲ್ಲಿ ಆರೋಗ್ಯ-ಸಂಬಂಧಿತ ಫೀಚರ್ಸ್‌ಗಳಿಗೂ ಕೂಡ ಪ್ರಾಮುಖ್ಯತೆ ನೀಡಲಾಗಿದೆ. ಅದರಂತೆ ಈ ಸ್ಮಾರ್ಟ್‌ವಾಚ್‌ 24×7 ಹೃದಯ ಬಡಿತದ ಮೇಲ್ವಿಚಾರಣೆ, ನೈಜ-ಸಮಯದ SpO2 ಟ್ರ್ಯಾಕಿಂಗ್, ನಿದ್ರೆಯ ಮೇಲ್ವಿಚಾರಣೆಯನ್ನು ಮಾಡಲಿದೆ. ಇದಲ್ಲದೆ ಬೋಟ್ ಸ್ಟಾರ್ಮ್ ಪ್ರೊ ಕಾಲ್‌ ನಿಮ್ಮ ಆಕ್ಟಿವಿಟಿಗಳನ್ನು ಟ್ರ್ಯಾಕ್ ಮಾಡುವ 700+ ಆಕ್ಟಿವ್‌ ಮೋಡ್‌ಗಳನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟ್ ಅನ್ನು ಹೊಂದಿದೆ.

ಭಾರತದಲ್ಲಿ ಬೋಟ್ ಸ್ಟಾರ್ಮ್ ಪ್ರೊ ಕಾಲ್‌ ಸ್ಮಾರ್ಟ್‌ವಾಚ್‌ ಬೆಲೆ 3,799ರೂಪಾಯಿ ಆಗಿದೆ. ಇದು ಬೋಟ್ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ವಾಚ್‌ ಅನ್ನು ಚಾರ್ಕೋಲ್ ಬ್ಲ್ಯಾಕ್, ನೇವಿ ಬ್ಲೂ ಮತ್ತು ಸ್ಕಾರ್ಲೆಟ್ ರೆಡ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು ಎಂದು  ತಿಳಿದು ಬಂದಿದೆ.

ಕೇದರನಾಥ ಭಕ್ತರಿಗೆ ಜಿಯೋ ಸಂಸ್ಥೆಯಿಂದ ಗುಡ್ ನ್ಯೂಸ್…!

ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

‘ಟ್ವಿಟ್ಟರ್ ಬಳಕೆದಾರ’ರಿಗೆ ಭರ್ಜರಿ ಗುಡ್ ನ್ಯೂಸ್: ಈಗ ‘ಪೋಸ್ಟ್ ಎಡಿಟ್’ ಮಾಡಲು ಅವಕಾಶ

- Advertisement -

Latest Posts

Don't Miss