www.karnatakatv.net: ಬೆಂಗಳೂರು: ತರಗುಪೇಟೆಯಲ್ಲಿನ ನಿಗೂಢ ಸ್ಫೋಟದ ಬೆನ್ನಲ್ಲೇ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ ಪ್ರಕರಣ ಬೆಳಕಿಗೆ ಬಂದಿದೆ.
ಆನೇಕಲ್ ನ ಅತ್ತಿಬೆಲೆ ಬಳಿಯ ಲೇಟ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಹೊಗೆ ೩ ಕಿ.ಮೀ ವ್ಯಾಪಿಸಿದ್ದು, ೭ ಮಂದಿಗೆ ಗಾಯಗೊಂಡಿದ್ದಾರೆ. ಓರ್ವ ಸಾವಿನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸುತ್ತಮುತ್ತಲಿನ ಪ್ರದೇಶದಲ್ಲಿರುವ ಜನರಲ್ಲಿ ಆತಂಕ ಎದುರಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ.ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ ಟಿವಿ- ಬೆಂಗಳೂರು




