ಅಫ್ಘಾನಿಸ್ತಾನದಲ್ಲಿ ಬಾಂಬ್ ದಾಳಿ, 2 ಸಾವು, 12 ಜನರಿಗೆ ಗಾಯ..

ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಪೋಟ ನಡೆದಿದ್ದು, ಸ್ಥಳದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ 12 ಜನರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದುರಂತದಿಂದ ಪಾರಾಗಿರುವ ಇಲ್ಲಿನ ನೌಕರರು, ಕಚೇರಿ ಬಿಟ್ಟಿದ್ದಾರೆಂದು ವರದಿಯಾಗಿದೆ.

ಇಲ್ಲಿ ನಡೆದಿದ್ದು, ಆತ್ಮಾಹುತಿ ಬಾಂಬ್ ದಾಳಿಯಾಗಿದ್ದು, ತಾಲಿಬಾನ್ ಈ ಬಗ್ಗೆ ಯಾವುದೇ ವರದಿ ನೀಡಿಲ್ಲ. ಜನವರಿಯಲ್ಲಿಯೂ ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಾಗಿ, ಸಾವು ನೋವು ಸಂಭವಿಸಿತ್ತು. ಅಂದಿನಿಂದ, ಕಾಬುಲ್‌ನ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಆತ್ಮಾಹುತಿ ಬಾಂಬ್ ಸ್ಪೋಟ ಆಗಾಗ ಸಂಭವಿಸುತ್ತಿದೆ ಎಂದು ವರದಿಯಾಗಿದೆ. ಇನ್ನು ಘಟನೆಯಲ್ಲಿ ಮಗು ಕೂಡ ಗಂಭೀರವಾಗಿ ಗಾಯಗೊಂಡಿದೆ ಎಂದು ತಿಳಿದು ಬಂದಿದೆ.

ಇಲ್ಲಿನ ವಿದೇಶಾಂಗ ಸಚಿವಾಲಯಕ್ಕೆ ಹೋಗುವಾಗ ಸಿಗುವ ಚೆಕ್‌ ಪಾಯಿಂಟ್‌ನಲ್ಲಿ ಈ ದುರಂತ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಬಂದ ಆ್ಯಂಬುಲೆನ್ಸ್‌ನಲ್ಲಿ ಗಾಯಗೊಂಡವರನ್ನ, ಹತ್ತಿರದ ವಜೀರ್ ಅಕ್ಬರ್ ಖಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೀತಿಯಲ್ಲಿ ಬಿದ್ದು ಸಂಸಾರದಲ್ಲಿ ತೇಲಲು ಸಿದ್ದವಾಗಿರುವ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ

ಚಿನ್ನದ ಪದಕಕ್ಕೆ ಮುತ್ತಿಟ್ಟು ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಬಾಕ್ಸರ್

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

About The Author