www.karnatakatv.net: ಕುಮಟಾ ಪಟ್ಟಣದಲ್ಲಿ ಬಾಂಬ್ ಪತ್ತೆಯಾಗಿದ್ದು, ಅದು ಡಮ್ಮಿ ಬಾಂಬ್ ಆಗಿದೆ ಎಂದು ಖಚಿತಪಡಿಸಲಾಗಿದೆ.
ವಿಧ್ಯಾದಿರಾಜ್ ಪಾಲಿಟೆಕ್ನಿಕ್ ಹಿಂಬಾಗದ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಬಾಂಬ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕವನ್ನು ಸೃಷ್ಠಿಸಿತ್ತು ನಂತರ ಮಂಗಳೂರಿನಿoದ ಬಂದಿದ್ದ ಬಾಂಬ್ ನಿಷ್ಕ್ರಿಯ ದಳ ಡಮ್ಮಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ಕೊಂಚ ದೂರ ಮಾಡಿದ್ದಾರೆ. ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜ್‌ನ ಹಿಂಭಾಗದಲ್ಲಿ 100- 150 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ ಥೇಟ್ ಬಾಂಬ್ ಅನ್ನೇ ಹೋಲುವ ವಸ್ತು ಪತ್ತೆಯಾಗಿತ್ತು. ಈ ಸುದ್ದಿ ಹಬ್ಬುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್ ಪತ್ತೆಯಾದ ಪ್ರದೇಶದ ಸಮೀಪದಲ್ಲೇ ರೈಲ್ವೇ ನಿಲ್ದಾಣ ಇರುವ ಹಿನ್ನಲೆ ಕುಮಟಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ತೀವ್ರ ಶೋಧ ಕೈಗೊಂಡು ಬಿಗಿ ಭದ್ರತೆ ವಹಿಸಿದ್ದಾರೆ.
ಕಾಲೇಜು ಹಿಂಭಾಗದಲ್ಲಿ ಅನುಮಾನಾಸ್ಪದವಾಗಿ ಬಿದ್ದಿದ್ದ ಬಾಂಬ್ ರೂಪದಲ್ಲಿರುವ ವಸ್ತುವನ್ನು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾಲೇಜ್ ಸುತ್ತಲೂ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.