Monday, April 14, 2025

Latest Posts

KAVERI WATER: ಮೊದಲೇ ವಾದ ಮಾಡಿದ್ದರೆ ಇಷ್ಟೊಂದು ನೀರು ಹಾಳಾಗುತ್ತಿರಲಿಲ್ಲ ; ಬೊಮ್ಮಾಯಿ..!

- Advertisement -

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ‌ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್ ಗೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ. ಟಿಕೆಟ್ ಸಿಗದೇ ಇದ್ದವರು ಹೋಗೋದು ಸಹಜ ಅದರ ಬಗ್ಗೆ ನಾವೇನು ಹೆಚ್ಚು ತಲೆ ಕೆಡಿಸಿಕೊಳ್ಳಲ್ಲ. ಕಾಂಗ್ರೆಸ್ ನ‌ ಈ‌ ಆಪರೇಶನ್ ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ ಎಂದರು.

ಕಾವೇರಿ ನೀರಿಗಾಗಿ ಸಿಎಂ ಅವರು ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ. ಈಗ 3 ಸಾವಿರ ಕ್ಯೂಸೆಕ್ ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ. ಜನ‌ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದೆ.  ಸರ್ಕಾರ ಈಗ ಎಚ್ಚೆತ್ತುಕೊಂಡಿದೆ ಎಂದರು.

ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ.  ತಮಿಳುನಾಡು‌ ಟ್ರಿಬ್ಯುನಲ್ ಆದೇಶವನ್ನ ಉಲ್ಲಂಘನೆ ಮಾಡಿದೆ. ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು.

ಕಾವೇರಿ ಅಷ್ಟೇ ಅಲ್ಲ ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ‌ ವಿಚಾರದಲ್ಲಿ‌ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದರು.

ಇನ್ನು ನಾಳಿನ ಬಂದ್ ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ, ಕಾವೇರಿಗಾಗಿ ಎಲ್ಲಿಯವರೆಗೂ ಹೋರಾಟ ಇರುತ್ತೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತೆ. ಉತ್ತರ ಕರ್ನಾಟಕ‌ ಭಾಗದಲ್ಲಿ ಸಾಕಷ್ಟು ಬರಗಾಲ‌ ಇದೆ. ಈಗಾಗಲೇ ಮುಂಗಾರು ಮುಗಿದಿದೆ. ಮುಂಗಾರು ಬೆಳೆ ನಾಶವಾಗಿರುವ ರೈತರು ಕಂಗಾಲಾಗಿದ್ದಾರೆ. ಆದರೆ ಬೆಳೆ ಪರಿಹಾರಕ್ಕೆ ಸರ್ಕಾರ ಮುಂದಾಗಿಲ್ಲ.

ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಹಿಂದೆ ಪ್ರವಾಹ ಬಂದಾಗ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿದ್ದೇವೆ. ಬಹುತೇಕ‌ ಸಂದರ್ಭದಗಳಲ್ಲಿ‌ ರಾಜ್ಯದ ರೈತರಿಗೆ ನಾವು ಪರಿಹಾರ ಒದಗಿಸಿದ್ದೇವೆ. ರಾಜ್ಯ ಸರ್ಕಾರ ಈ‌ ನಿಟ್ಟಿನಲ್ಲಿ‌ ಕೆಲಸ‌ ಮಾಡುತ್ತಿಲ್ಲ ಎಂದು ಆರೋಪಿಸಿದರು.

Hindu maha ganapathi: ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಅದ್ದೂರಿ ವಿಸರ್ಜನೆ ಕಾರ್ಯಕ್ರಮ..!

Congress: ಕಾಂಗ್ರೆಸ್ ಸೇರಲು ಮಾಜಿ ಶಾಸಕರು ಸಿದ್ದತೆ; ಬಿಜೆಪಿಗೆ ಶೆಟ್ಟರ್ ಶಾಕ್..!

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

- Advertisement -

Latest Posts

Don't Miss