ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್ ಮತ್ತೆ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಟ್ವಿಟ್ ನಲ್ಲಿ ತಿಳಿಸಿದೆ.
'@BSYBJP ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ
ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು.ಈಗ @BSBommai ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ.
1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ!
— Karnataka Congress (@INCKarnataka) August 10, 2022
ಬಿಜೆಪಿ ಹೈಕಮಾಂಡಿಗೆ ಕರ್ನಾಟಕದ ಸಿಎಂಗಳೆಂದರೆ #PuppetCM ಇದ್ದಹಾಗೆ, ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಬಿಎಸ್ ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ ಬಸವರಾಜ ಬೊಮ್ಮಾಯಿ ಅವರು ಯಾವ ಲೆಕ್ಕ! ‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ & ವೈಫಲ್ಯಗಳ ಕೊಡ ತುಂಬಿದೆ ಎಂದು ಹೇಳಿದೆ.
ಬಿಜೆಪಿ ಹೈಕಮಾಂಡಿಗೆ ಕರ್ನಾಟಕದ ಸಿಎಂಗಳೆಂದರೆ #PuppetCM ಇದ್ದಹಾಗೆ,
ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ!@BSYBJP ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ಬೋಂಬೆ @BSBommai ಅವರು ಯಾವ ಲೆಕ್ಕ!'ಸಂತೋಷ ಕೂಟ'ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ.
ಹಗರಣ & ವೈಫಲ್ಯಗಳ ಕೊಡ ತುಂಬಿದೆ.
— Karnataka Congress (@INCKarnataka) August 10, 2022




