state news
ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ ಗಂಗಾದರೇಶ್ವರ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮೋಹನ್ ರಾಜು ರವರು, ಮಾಜಿ ನಗರಸಭಾ ಸದಸ್ಯರಾದ ಮುನಿರಾಮ್ ರವರು, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. HSR ಲೇಔಟ್‌ನ 6ನೇ ಸೆಕ್ಟರ್ ನಲ್ಲಿರುವ IAS ಕಾಲೋನಿಯಲ್ಲಿ ಇಂದು ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಾಯಿತು.
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ HSR ಲೇಔಟ್ 2ನೇ ಸೆಕ್ಟರ್ ನಲ್ಲಿನ ಬಸವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಿ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಸದಾಶಿವ ರೆಡ್ಡಿ ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಇಂದು HSR ಲೇಔಟ್ ನಲ್ಲಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ MSR ಕಪ್ ಕ್ರಿಕೆಟ್ ಟೂರ್ನಮೆಂಟ್ ಅನ್ನು ಉದ್ಘಾಟಿಸಲಾಯಿತು ಹಾಗೂ ಆಟಗಾರರಿಗೆ ಹುರಿದುಂಬಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸ್ ರೆಡ್ಡಿ ರವರು,ಕಿಶೋರ್ ರೆಡ್ಡಿ ರವರು, ಯುವಮೋರ್ಚಾ ಅಧ್ಯಕ್ಷರಾದ ಲಕ್ಷಣ್ ರೆಡ್ಡಿ ರವರು, ವಾರ್ಡ್ ಅಧ್ಯಕ್ಷರಾದ ರಾಘವೇಂದ್ರ ರವರು,ಮತ್ತಿತ್ತರರು ಉಪಸ್ಥಿತರಿದ್ದರು.ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೊಮ್ಮನಹಳ್ಳಿಯ ಡೆಕ್ಕನ್ ವೈಯರ್ಸ್ ಹತ್ತಿರ ಇರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಿದರು.