ಧಾರವಾಡ (ಕರ್ನಾಟಕ ವಾರ್ತೆ) ಆ.15: ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಅವರು ಗಣ್ಯರೊಂದಿಗೆ ಕಾರ್ಯಕ್ರಮ ವೇದಿಕೆಯಲ್ಲಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪಪೊಲೀಸ್ ಆಯುಕ್ತರಾದ ಡಾ. ಗೋಪಾಲ ಬ್ಯಾಕೋಡ, ರಾಜೀವ.ಎಂ., ಉಪವಿಭಾಗಾಧಿಕಾರಿ ಅಶೋಕ ತೇಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ವಾರ್ತಾ ಸಹಾಯಕ ಅಧಿಕಾರಿ ಡಾ.ಎಸ್.ಎಂ.ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Digvijay Singh: ಎಲ್ಲ ಧರ್ಮಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ:
Independence Day : ಮಂಗಳೂರು : ನೆಹರೂ ಮೈದಾನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ