ಇಬ್ಬರಿಗೂ ಒಂದೇ ಆಧಾರ್‌ ಕಾರ್ಡ್‌ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಆನಂದ ನಗರ ಇಂದ ಕಿಮ್ಸ್ ಗೆ ಹೋಗುವ ಬಸ್ಸಿನಲ್ಲಿ ಒಂದೇ ಆಧಾರ್‌ ಕಾರ್ಡ್‌ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ರೆಡ್‌ಹ್ಯಾಂಡಾಗಿ ನಿರ್ವಾಹಕನ (Conductor) ಕೈಗೆ ಸಿಕ್ಕಿ ಬಿದ್ದಿದ್ದಾರೆ.

ನಿರ್ವಾಹಕರು ಎಂದಿನಿಂತೆ ಟಿಕೆಟ್‌ ಕೊಡುವ ಮುನ್ನ ದಾಖಲೆ ಕೇಳಿದ್ದಾರೆ. ಈ ವೇಳೆ ಮಹಿಳೆಯರು ಆಧಾರ್‌ ಕಾರ್ಡ್‌ ತೋರಿಸಿದ್ದಾರೆ. ಇಬ್ಬರ ಕಾರ್ಡ್‌ನಲ್ಲಿ ಒಂದೇ ನಂಬರ್‌ ಇರುವುದನ್ನು ನೋಡಿ ಇದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಕೊನೆಗೆ ಒಬ್ಬರು ಟಿಕೆಟ್‌ ಪಡೆದು ಪ್ರಯಾಣಿಸಿದ್ದಾರೆ.

ನಿರ್ವಾಹಕನೇ ಈ ವಿಡಿಯೋ ಮಾಡಿ ಯಾವ ರೀತಿ ಮಹಿಳೆಯರು ಮೋಸ ಮಾಡುತ್ತಾರೆ ಎಂದು ವಿವರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕರ್ನಾಟಕ ರಾಜ್ಯಕ್ಕೆ ಸೇರಿದ ಮಹಿಳೆಯರು ಮಾತ್ರ ಶಕ್ತಿ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಬೇರೆ ರಾಜ್ಯದವರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ.

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

About The Author