ಕಳ್ಳತನ ಮತ್ತು ಅಸಭ್ಯ ವರ್ತನೆ ಹಿನ್ನೆಲೆ ಅಡಿಕೆ ಮರಕ್ಕೆ ಕಟ್ಟಿ ಬಾಲಕರ ಮೇಲೆ ಹಲ್ಲೆ..

Davanagere News: ದಾವಣಗೆರೆ:ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ ನೀಡಿರುವ ವಿಡಿಯೋ ಕೂಡ ವೈರಲ್ ಆಗಿದೆ. ಮಾಧ್ಯಮಗಳು ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಹತ್ತು ಯುವಕರಿಂದ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಹತ್ತು ಜನರ ಪೈಕಿ ನಾಲ್ವರು ಅಪ್ರಾಪ್ತರು. ಸುಭಾಷ್ (23), ಲಕ್ಕಿ(21), ದರ್ಶನ್ (22), ಪರಶು (25), ಶಿವದರ್ಶನ್ (23), ಹರೀಶ್ (25), ಪಟ್ಟಿ ರಾಜು(20), ಭೂಣಿ (18), ಸುಧನ್ ಅಲಿಯಾಸ್ ಮಧುಸೂಧನ್ ವಿರುದ್ದ ಕೇಸ್ ದಾಖಲಾಗಿದೆ.

About The Author